ಚಂದನವನದ ನಟಿ ಲೀಲಾವತಿ ಅಸ್ತಂಗತ – ಪುತ್ರನ ಬಿಟ್ಟು ಅಗಲಿದ ನಟಿ

ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಲೀಲಾವತಿಯವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಡಾ. ರಾಜ್ʼಕುಮಾರ್, ವಿಷ್ಣುವರ್ಧನ್ ಸೇರಿದಂತೆ ಖ್ಯಾತ ನಟರ ಜೊತೆ 600ಕ್ಕೂ ಅಧಿಕ ಸಿನೆಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ 86 ವರ್ಷದ ನಟಿ ಲೀಲಾವತಿಯವರು ಪುತ್ರ ವಿನೋದ್ ರಾಜ್ ಅವರನ್ನು ಬಿಟ್ಟು ಅಗಲಿದ್ದಾರೆ.

ಹಿರಿಯ ನಟಿ ಲೀಲಾವತಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ನಟ ಶಿವರಾಜ್ʼಕುಮಾರ್, ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಲೀಲಾವತಿಯವರ ಆರೋಗ್ಯ ವಿಚಾರಿಸಿದ್ದರು. ಸಿಎಂ ಸಿದ್ದರಾಮಯ್ಯನವರು ಲೀಲಾವತಿಯವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸುವ ಬಗ್ಗೆ ಕಳೆದ ಎರಡು ದಿನದ ಹಿಂದೆಯಷ್ಟೇ ಘೋಷಣೆ ಮಾಡಿದ್ದರು.

ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಇಬ್ಬರೂ ಸಮಾಜ ಸೇವಗಳ ಮೂಲಕವೇ ಗುರುತಿಸಿಕೊಂಡಿದ್ದರು.

You might also like
Leave A Reply

Your email address will not be published.