ರಾಯಚೂರಿನ ಶಾಖೋತ್ಪನ್ನ ಕೇಂದ್ರದಲ್ಲಿನ 4 ಘಟಕಗಳು ಬಂದ್‌ – ವಿದ್ಯುತ್‌ ಕ್ಷಾಮದ ಭೀತಿ

ಒಂದೆಡೆ ಬರಗಾಲದಿಂದ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಮತ್ತೊಂದೆಡೆ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದ್ದು ಜನರಲ್ಲಿ ಆತಂಕ ಮನೆಮಾಡಿದೆ.

ಹೌದು! ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌’ಟಿಪಿಎಸ್‌’ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ.

ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ.

4 units shut down in Raichur thermal power plant - fear of power shortage

ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ.

You might also like
Leave A Reply

Your email address will not be published.