ಕಾಟೇರ ದರ್ಬಾರ್ – ಹಿಂದಿನ ದಾಖಲೆಗಳೆಲ್ಲಾ ಡಮಾರ್

ಖ್ಯಾತ ನಟ ದರ್ಶನ್ ಅವರ ಅಭಿನಯದ ಕಾಟೇರ ಸಿನಿಮಾ ಒಂದು ಕೋಟಿಗೂ ಅಧಿಕ ಟಿಕೆಟ್ ಮಾರಾಟವಾಗಿದ್ದು, 206 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಿಂದ ಕೊಳ್ಳೆ ಹೊಡೆಯುವ ಮೂಲಕ ಮತ್ತೊಂದು ದಾಖಲೆಯನ್ನು ಮುರಿದಿದೆ. 200 ಕೋಟಿ ರೂಪಾಯಿ ಕ್ಲಬ್ ಸೇರಿದ ಪೋಸ್ಟರ್ ಅನ್ನು ದರ್ಶನ್ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಒಂದು ಕಡೆ ಸೆಲೆಬ್ರಿಟಗಳು ಸಿನಿಮಾವನ್ನು ಮೆಚ್ಚಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಕಾಟೇರ ಸಿನಿಮಾ ರಿಲೀಸ್ ಗಳಿಕೆಯೂ ಭರ್ಜರಿಯಾಗಿದೆ. ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದರು.

‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ ಮತ್ತು ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನು ಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದರು.

ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

You might also like
Leave A Reply

Your email address will not be published.