ವಿವಾದಗಳಿಂದಲೇ ಸುದ್ದಿಯಾಗಿದ್ದ ಫೈಟರ್‌ ಸಿನೆಮಾ ಒಟಿಟಿಗೆ‌

ಬಾಲಿವುಡ್ ನ ಮತ್ತೊಂದು ಸೂಪರ್ ಹಿಟ್ ಸಿನಿಮಾವು ಹಲವು ದೂರುಗಳು, ಸಂಕಷ್ಟಗಳು ಹಾಗೂ ದೃಶ್ಯಕ್ಕೆ ಬಿದ್ದ ಕತ್ತರಿ ಹೀಗೆ ನಾನಾ ಬಗೆಯಲ್ಲಿ ಹಲವು ವಿವಾದಗಳಿಗೆ ಕಾರಣವಾದರೂ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿತ್ತು. ಇದೀಗ ಒಟಿಟಿಗೆ ಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹೈಪ್ ಕ್ರಿಯೇಟ್ ಮಾಡುತ್ತಿದೆ.

ಹೌದು! ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ನ “ಫೈಟರ್” ಸಿನಿಮಾವನ್ನು ಇಂದಿನಿಂದ ನೀವು ಒಟಿಟಿಯಲ್ಲಿ ನೋಡಬಹುದಾಗಿದೆ. ಈ ಸಿನಿಮಾ ಬಿಡುಗಡೆಗೊಂಡ ದಿನದಿಂದ ಈವರೆಗೂ ಒಂದಿಲ್ಲೊಂದು ಸಂಕಷ್ಟವನ್ನು ಎದುರಿಸುತ್ತಲೇ ಬಂದಿದೆ. ಈ ಹಿಂದೆ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿತ್ತು. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿತ್ತು.

Fighter movie, which was in the news due to controversies, is for OTT

ಈ ಹಿಂದೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ಸಿನಿಮಾದಿಂದಲೇ ಆ ದೃಶ್ಯವನ್ನು ಕೈ ಬಿಡಲಾಗಿತ್ತು. ಫೈಟರ್ ಸಿನಿಮಾದಲ್ಲೂ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಳ್ಳಲಿಲ್ಲ. ಇದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.

ಇನ್ನೂ ಫೈಟರ್ ಸಿನಿಮಾದ ಚುಂಬನ ದೃಶ್ಯ ಕುರಿತಂತೆ ವಾಯುಸೇನಾ ಅಧಿಕಾರಿಯೊಬ್ಬರು ಗರಂ ಆಗಿದ್ದಾರೆ. ವಾಯುಸೇನೆ ಸಮವಸ್ತ್ರ ಧರಿಸಿಕೊಂಡು ಹೃತಿಕ್ ಮತ್ತು ದೀಪಿಕಾ ಚುಂಬಿಸುವ ದೃಶ್ಯವು ವಸ್ತ್ರ ಸಂಹಿತೆ ನೀತಿಯನ್ನು ಉಲ್ಲಂಘಿಸಿದೆ. ಇದರಿಂದಾಗಿ ವಾಯುಸೇನೆಗೆ ಮುಜುಗರ ತರಿಸಿದೆ ಎಂದು ಅಧಿಕಾರಿ ಅಸ್ಸಾಮಿನ ಸೌಮ್ಯ ದೀಪ್ ದಾಸ್ ಎನ್ನುವವರು ದೂರು ದಾಖಲಿಸಿದ್ದಾರೆ.

You might also like
Leave A Reply

Your email address will not be published.