ಸ್ವಾಭಿಮಾನ ಬಿಡದ ಸುಮಲತಾ – ಮೈತ್ರಿಗೆ ಬೆಂಬಲ, ಬಿಜೆಪಿಗೆ ಸೇರ್ಪಡೆ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು, ಚುನಾವಣೆ ಘೋಷಣೆಯಾಗಿದ್ದರೂ ತಮ್ಮ ಅಂತಿಮ ನಿರ್ಧಾರ ತಿಳಿಸಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿಯವರ ಭೇಟಿಯ ನಂತರ ಇಂದು ತಮ್ಮ ಅಂತಿಮ ನಿರ್ಧಾರ ಘೋಷಣೆ ಮಾಡಿದ್ದಾರೆ.

ಇಂದು ಮಂಡ್ಯದಲ್ಲಿ ತಮ್ಮ ಬೆಂಬಲಿಗರು, ಹಿತೈಷಿಗಳ ಸಭೆ ನಡೆಸಿದ ಸುಮಲತಾ ಅವರು, ಹಠಕ್ಕೆ ಬಿದ್ದು ನಾನು ಈ ಬಾರಿ ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನನ್ನ ಬೆಂಬಲ ನೀಡುತ್ತೇನೆ. ನನ್ನ ಎಂಪಿ ಸ್ಥಾನವನ್ನು ಬಿಟ್ಟು ಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೀನಿ ಎಂದು ಘೋಷಿಸಿದ್ದಾರೆ.

ಬೆಂಬಲಿಗರ ಸಭೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಅವರು, ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನರನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ನಿಮ್ಮ ಮುಂದೆ ಇಂದು ಪ್ರಮಾಣ ಮಾಡಿ ಹೇಳುತ್ತೇನೆ. ನಾನು ಗೌರವ ಇರದ ಕಡೆ ಹೋಗಲ್ಲ, ಕಾಂಗ್ರೆಸ್ ನಾಯಕರು ನನ್ನ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎಂದು ನೀವೆಲ್ಲಾ ನೋಡಿರುತ್ತೀರಿ, ಗೌರವ ಇಲ್ಲದ ಕಡೆ ನಾನ್ಯಾಕೆ ಹೋಗಲಿ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ʼಗೆ ತಿರುಗೇಟು ನೀಡಿದ್ದಾರೆ.

Sumalatha who did not give up her self-respect - support for alliance, decision to join BJP

ಬಿಜೆಪಿ ಸೇರ್ಪಡೆ :

ಈ ದೇಶದ ಭವಿಷ್ಯದ ಚುಕ್ಕಾಣಿ ಹಿಡಿಯುವಲ್ಲಿ ಪ್ರಧಾನಿ ಮೋದಿ ಸಮರ್ಥರು ಎಂದು ನಾನು ಅಂದುಕೊಳ್ಳುತ್ತಿದ್ದೇನೆ. ಮೋದಿಯವರು ಇಡೀ ವಿಶ್ವವೇ ಮೆಚ್ಚಿಕೊಂಡ ನಾಯಕ. ಅವರಲ್ಲಿ ಸ್ವಾರ್ಥ ರಾಜಕೀಯವಲ್ಲ, ಸ್ವತಂತ್ರ ಸಂಸದೆಯಾಗಿದ್ದ ನನಗೆ ಮಂಡ್ಯ ಜಿಲ್ಲೆಯ ಕೆಲಸ ಮಾಡಲು ಅನುದಾನ ಬಿಡುಗಡೆ ಮಾಡಲು ಬಿಜೆಪಿ ಸರ್ಕಾರ ಸಹಾಯ ಮಾಡಿದೆ. ಆದ್ದರಿಂದ ಬಿಜೆಪಿಗೆ ಸೇರಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಲು ಏಪ್ರಿಲ್ 6ರಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಇದೇ ವೇಳೆ ಘೋಷಣೆ ಮಾಡಿದರು.

ಈ ಸಭೆಯಲ್ಲಿ ನಟ ದರ್ಶನ್ ಅವರೂ ಸುಮಲತಾರಿಗೆ ಸಾಥ್ ಕೊಟ್ಟರು.

You might also like
Leave A Reply

Your email address will not be published.