ಬಿಜೆಪಿ ಮೈತ್ರಿಕೂಟಕ್ಕೆ ಬಿಹಾರದಲ್ಲಿ ಶಾಕ್‌ : 22 ನಾಯಕರ ರಾಜೀನಾಮೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿ‌ಪಕ್ಷದಲ್ಲೂ ವಿವಿಧ ರೀತಿಯ ಬೆಳವಣಿಗೆಗಳು ಕಾಣಿಸಿಕೊಳ್ಳಲಾರಂಭಿಸಿದೆ. ಅದರಂತೆ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲದಲ್ಲಿ ರಾಜೀನಾಮೆ ಸಲ್ಲಿಸಲು‌ ನಿರ್ಧರಿಸಿರುವುದು ರಾಷ್ಟ್ರ ರಾಜಕೀಯದಲ್ಲಿ ಹೊಸ ಬಿರುಗಾಳಿ ಮೂಡಿಸಿದೆ.

ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದೆ ರೇಣು ಕುಶ್ವಾಹಾ, ಹೊರಗಿನವರಿಗೆ ಟಿಕೆಟ್ ಕೊಡುವ ಬದಲು ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ನಾವ್ಯಾರು ಸಮರ್ಥರು ಇಲ್ವಾ? ನಾವು ಪಕ್ಷಕ್ಕಾಗಿ ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ ಎಂದು ಕಿಡಿಕಾರಿದರು.

“ಇಂಡಿ” ಒಕ್ಕೂಟಕ್ಕೆ ನಮ್ಮ ಬೆಂಬಲ

ಇನ್ನು ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಮತ್ತು ಎಲ್’ಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ಬಂಡಾಯ ಎಲ್’ಜೆಪಿ ನಾಯಕರು ಈಗ ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದು ಮಾಜಿ ಸಂಸದೆ ರೇಣು ಕುಶ್ವಾಹಾ ತಿಳಿಸಿದರು.

ದೇಶದಲ್ಲಿ ಇಂತಹ ಮಹತ್ವದ ಚುನಾವಣೆಗಳು ನಡೆಯುತ್ತಿರುವಾಗ ಎಲ್.ಜೆ.ಪಿ ವರಿಷ್ಠರು ಪಕ್ಷದವರಿಗೆ ಟಿಕೆಟ್ ನೀಡದೆ ಕಾರ್ಯಕರ್ತರನ್ನು ಬೆಚ್ಚಿ ಬೀಳಿಸಿದ್ದಾರೆ. ‘ಚಿರಾಗ್ ಪಾಸ್ವಾನ್ಗೆ ಜಯವಾಗಲಿ’ ಎಂಬ ಘೋಷಣೆಗಳನ್ನು ಹಗಲಿರುಳು ಎಬ್ಬಿಸುತ್ತಿದ್ದ ಜನರು ‘ಹೊಸ ಬಿಹಾರ’ದ ನಿರೀಕ್ಷೆಯಲ್ಲಿದ್ದರು. ಇದೀಗ ಅವರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಪುಡಿಮಾಡಲಾಗಿದೆ. ಈಗ ದೇಶವನ್ನು ಉಳಿಸಲು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು. ಹಾಗಾಗಿ ನಾವು ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದರು.

Shock in Bihar for BJP alliance: 22 leaders resign
ಪಕ್ಷದ ಸಂಘಟನಾ ಕಾರ್ಯದರ್ಶಿ ರವೀಂದ್ರ ಸಿಂಗ್ ಅವರು ಚಿರಾಗ್ ಪಾಸ್ವಾನ್ ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಚಿರಾಗ್ ಪಾಸ್ವಾನ್ ಅವರು ಬಿಹಾರದ ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟುಗಳು ಸಿಕ್ಕಾಗ ಆ ಎಲ್ಲಾ ಟಿಕೆಟ್ಗಳನ್ನು ಮಾರಾಟ ಮಾಡಿದ್ದಾರೆ. ಅವರಿಗೆ ಬಿಹಾರದ ಜನರು ಉತ್ತರ ನೀಡಲಿದ್ದಾರೆ ಎಂದು ಹರಿಹಾಯ್ದರು.

ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಬಿಹಾರದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19, ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಂತ ಜೂನ್ 1 ರಂದು ನಡೆಯಲಿದೆ.

ರಾಜೀನಾಮೆ ನೀಡಿದ ಪ್ರಮುಖರು:

ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್’ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಡಾಂಗಿ ಸೇರಿದ್ದಾರೆ. ಹಣಕ್ಕಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

You might also like
Leave A Reply

Your email address will not be published.