ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಗೆ ಕಾಂಗ್ರೆಸ್‌ ಗೈರು

ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಭವ್ಯವಾಗಿ ಹಮ್ಮಿಕೊಡಿದ್ದು, ಈಗಾಗಲೇ ದೇಶ ವಿದೇಶದ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದ್ದು ಬಹುತೇಕ ರಾಜಕೀಯ ಪಕ್ಷದ ಮುಖಂಡರನ್ನೂ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಗೈರಾಗುವ ನಿರ್ಧಾರ ಮಾಡಿದೆ. ಇಂದು ಪಕ್ಷದ ಅಧಿಕೃತ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೈ ಪಕ್ಷದ ಅಧಿನಾಯಕ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌದರಿಯವರಿಗೆ ಸಮಾರಂಭಕ್ಕೆ ಬರುವಂತೆ ಅಧಿಕೃತ ಆಹ್ವಾನ ಪತ್ರ ನೀಡಿತ್ತು. ಈ ಮೂಲಕ ಯಾವುದೇ ಒಬ್ಬ ಕಾಂಗ್ರೆಸ್ ನಾಯಕರು ಕೂಡ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

Congress

ಆಯೋಧ್ಯೆಯ ರಾಮಮಂದಿರ ಉದ್ಘಾಟನೆ ಆರ್ʼಎಸ್ʼಎಸ್ ಮತ್ತು ಬಿಜೆಪಿ ಪ್ರಾಯೋಜಕತ್ವದ ಕಾರ್ಯಕ್ರಮವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶಕ್ಕೆ ತರಾತುರಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇವಸ್ಥಾನದ ನಿರ್ಮಾಣ ಕಾರ್ಯ ಇನ್ನೂ ಮುಕ್ತಾಯವಾಗದ್ದರಿಂದ ಕಾಂಗ್ರೆಸ್‌ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಸಂಸದರು, ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿರುವ ಜೈರಾಮ್‌ ರಮೇಶ್‌ ಅವರು‌ ಅಧಿಕೃತ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

You might also like
Leave A Reply

Your email address will not be published.