ನಾಲ್ವರು ಶಂಕರಾಚಾರ್ಯರನ್ನು ಯಾಕೆ ಬಿಜೆಪಿಯವರು ಪ್ರಶ್ನಿಸುತ್ತಿಲ್ಲ? – ಕಾಂಗ್ರೆಸ್ ಟೀಕೆ

ನಾಲ್ವರು ಶಂಕರಾಚಾರ್ಯರು ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿರುವುದ್ದನ್ನು ಬಿಜೆಪಿ ಪಕ್ಷದ ನಾಯಕರು ಪ್ರಶ್ನೆ ಮಾಡದೇ ಕಾಂಗ್ರೆಸ್ ಅನ್ನು ಮಾತ್ರ ಟಾರ್ಗೆಟ್ ಮಾಡುತ್ತಿರುವುದು ಯಾಕೆ? ಎಂದು ವಿರೋದ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಅಧೀರ್ ರಂಜನ್ ಚೌಧರಿ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂಬ ಹೇಳಿಕೆಯು ದೊಡ್ಡ ವಿವಾದಕ್ಕೆ ಕಾರಣವಾಗಿರುವುದ್ದನ್ನು ಮುಂದಿಟ್ಟುಕೊಂಡಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಹಿಂದೂ ವಿರೋಧಿಗಳಾಗಿದ್ದು, ರಾಮನನ್ನು ವಿರೋಧಿಸುವುದು ಕೂಡ ಇವರ ಸಂಪ್ರದಾಯವಾಗಿದೆ ಎಂದು ಹೇಳುವ ವಿಡಿಯೊವೊಂದನ್ನು ಬಿಜೆಪಿ ಹಂಚಿಕೊಂಡಿತ್ತು.

ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಕಾರ್ಯಕ್ರಮಕ್ಕೆ ಹಾಜರಾಗದ ನಾಲ್ವರು ಶಂಕರಾಚಾರ್ಯರನ್ನು ಯಾಕೆ ಬಿಜೆಪಿಯವರು ಪ್ರಶ್ನೆ ಮಾಡುತ್ತಿಲ್ಲ. ಅದರಲ್ಲಿ ಇಬ್ಬರು ಕಾರ್ಯಕ್ರಮವನ್ನು ಬೆಂಬಲಿಸಿದ್ದಾರೆ. ಶೃಂಗೇರಿ ಮಠದ ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಜಿ, ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸದಾನಂದ ಸರಸ್ವತಿ ಅವರು ಜನವರಿ 22 ರಂದು ರಾಮಮಂದಿರ ಪ್ರಾಣ ಪ್ರತಿಷ್ಠಾನ ಉದ್ಘಾಟನೆ ಸನಾತನ ಧರ್ಮದ ಅನುಯಾಯಿಗಳಿಗೆ ಸಂತೋಷದ ವಿಷಯವಾಗಿದೆ ಎಂದು ಹೇಳಿದ್ದಾರೆ.

ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಹೇಳುವುದೇನು?

ಪುರಿಯ ಜಗದ್ಗುರು ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಅವರು ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಮೊದಲೇ ಹೇಳಿದ್ದಾರೆ. ದೇಶದ ಪ್ರಧಾನಿಯವರು ಗರ್ಭಗುಡಿಗೆ ಹೋಗಿ ವಿಗ್ರಹವನ್ನು ಸ್ಪರ್ಶಿಸಿ ಪ್ರಾಣ ಪ್ರತಿಷ್ಠಾನ ಸಮಾರಂಭವನ್ನು ಮಾಡಲಿದ್ದಾರೆ. ಧರ್ಮಗ್ರಂಥದ ಮಾರ್ಗಸೂಚಿಗಳ ಪ್ರಕಾರವೇ ನಡೆಯಬೇಕೆ ಹೊರತು ರಾಜಕೀಯದ ರಣತಂತ್ರದಿಂದಲೋ ಅಲ್ಲ. ಇದರಲ್ಲಿ ಅರ್ಧ ಸತ್ಯ ಮತ್ತು ಅರ್ಧ ಸುಳ್ಳುಗಳನ್ನು ಬೆರೆಸಬಾರದು. ಎಲ್ಲವೂ ಧರ್ಮಗ್ರಂಥದ ಜ್ಞಾನದೊಂದಿಗೆ ಹೊಂದಾಣಿಕೆಯಾಗಬೇಕು. ಹೀಗಾಗಿ ನಾನು ಕಾರ್ಯಕ್ರಮಕ್ಕೆ ವಿರೋಧವೂ ಇಲ್ಲ, ಹಾರಾಜುವುದೂ ಇಲ್ಲ, ಇದು ನನ್ನ ನಿಲುವು ಎಂದು ಹೇಳಿದ್ದಾರೆ.

ರಾಮಮಂದಿರ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ.

You might also like
Leave A Reply

Your email address will not be published.