ಸಿದ್ದರಾಮಯ್ಯ ಸರ್ಕಾರದ ಮಕ್ಕಳಾಟ? – ಕೊನೆಗೂ 5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಹೇಳಿದ್ದೇನು?

ಚುನಾವಣೆ, ಅನುದಾನ, ಯೋಜನೆ ಹೀಗೆ ಪರಸ್ಪರ ಕೆಸರೆರಚಾಟಕ್ಕೆ ಸೀಮಿತವಾಗಿದ್ದ ರಾಜಕೀಯ ಈಗ ಮಕ್ಕಳ ಶಿಕ್ಷಣಕ್ಕೂ ವ್ಯಾಪಿಸಿದಂತಿದೆ. ಮಕ್ಕಳ ಉಜ್ವಲ ಭವಿಷ್ಯದ ಮೇಲೆ ಕಲ್ಲು ಹಾಕುವಂತಿರುವ ಬೆಳವಣಿಗೆ ಕರ್ನಾಟಕದಲ್ಲಿ ನಡೆಯುತ್ತಿದ್ದು, ನಡೆಯುತ್ತಿರುವುದೇನು? ಇಲ್ಲಿದೆ ನೋಡಿ ವಿವರ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅರೆ ಅನುದಾನಿತ ಶಾಲೆಗಳ 5, 8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕೈಗೊಂಡಿತ್ತು. ಈಗಾಗಲೇ ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ನಾವು ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಿಲ್ಲ ಎಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ಮಾಧ್ಯಮಿಕ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣಕ್ಕೆ ಹೊಂದಿಕೆಯಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ಬೋರ್ಡ್ ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಕೈಗೊಂಡಿತ್ತು. ಐದನೇ, ಎಂಟನೇ, ಒಂಬತ್ತನೇ ತರಗತಿ ಹಾಗೂ ಪ್ರಥಮ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆಯ ಮಾದರಿಯಲ್ಲಿ ನಡೆಸುವ ನಿರ್ಧಾರವನ್ನು ಪ್ರಕಟಿಸಿದ್ದ ರಾಜ್ಯ ಸರ್ಕಾರ, ಈ ಕುರಿತಾದ ಸುತ್ತೋಲೆಯನ್ನೂ ಹೊರಡಿಸಿತ್ತು.

Child play of Siddaramaiah government? - High Court order about the 5th, 8th, 9th and 11th class board exams

5, 6, 8, 9ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾಮಾನ್ಯ ಪರೀಕ್ಷೆ ನಡೆಯುತ್ತಿದ್ದು, ಖಾಸಗಿ ಶಾಲೆಗಳು ಬೋರ್ಡ್ ಪರೀಕ್ಷೆಗೆ ಸಮ್ಮತಿ ಸೂಚಿಸಿಲ್ಲ. ಆದರೆ, ಪೋಷಕರು, ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೆ ಯಾವುದೇ ರೀತಿಯ ಆಕ್ಷೇಪ ವ್ಯಕ್ತಪಡಿಸಿಲ್ಲ. ಈ ನಡುವೆ ತಡೆಯಾಜ್ಞೆಯಿಂದ ಮಕ್ಕಳ ಭವಿಷ್ಯಕ್ಕೆ ಕುತ್ತಾಗಲಿದೆ. ಹೀಗಾಗಿ ಏಕಸದಸ್ಯ ಪೀಠವು ನೀಡಿರುವ ಪರೀಕ್ಷೆಗೆ ತಡೆಯಾಜ್ಞೆ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಧರಿಸಿ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಮತ್ತೆ ಆದೇಶ ನೀಡಿತ್ತು. ಈ ಆದೇಶವನ್ನು ಮತ್ತೆ ಪ್ರಶ್ನಿಸಿ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂ ಕೋರ್ಟ್’ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ಆಧರಿಸಿ ಸುಪ್ರೀಂ, ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಮತ್ತೆ ತಡೆ ನೀಡಿತ್ತು. ಅಷ್ಟೇ ಅಲ್ಲದೇ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಹೈಕೋರ್ಟ್​ಗೆ ತಾಕೀತು ಮಾಡಿತ್ತು.

ಸರ್ವೋಚ್ಛ ನ್ಯಾಯಾಲಯದ ಈ ಆದೇಶದ ಮೇರೆಗೆ, ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರನ್ನೊಳಗೊಂಡ ವಿಭಾಗೀಯ ಪೀಠ, ಇದೀಗ ವಿಚಾರಣೆ ನಡೆಸಿ, ಮತ್ತೆ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ಈಗಾಗಲೇ ನಿಲ್ಲಿಸಿರುವ ಪರೀಕ್ಷೆಯನ್ನು ಮತ್ತೆ ಮುಂದುವರೆಸಲು ಆದೇಶಿಸಿದೆ. ಇದರೊಂದಿಗೆ ಸರ್ಕಾರಕ್ಕೆ ಚಾಟಿ ಬೀಸಿರುವ ಪೀಠ, ಮುಂಬರುವ ಶೈಕ್ಷಣಿಕ ವರ್ಷದ ಪರೀಕ್ಷೆಗಗಳಿಗೆ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ.

ಏನೇ ಇರಲಿ, ಮೊನ್ನೆಯಷ್ಟೇ ಬೋರ್ಡ್ ಎಕ್ಸಾಂ ಸ್ಥಗಿತಗೊಂಡಿತು ಎನ್ನುವ ಸುದ್ದಿ ತಿಳಿದು ಕಂಗಾಲಾಗಿದ್ದ ಮಕ್ಕಳಿಗೆ ಈ ಸುದ್ದಿ ಖುಷಿ ತಂದರೂ, ಮಕ್ಕಳ ಫಲಿತಾಂಶಕ್ಕೆ ಈ ಸರ್ಕಾರ-ಕೋರ್ಟ್ ನಡುವಿನ ಗೊಂದಲ ಪರಿಣಾಮ ಬೀರುವುದಂತೂ ಸತ್ಯ.

You might also like
Leave A Reply

Your email address will not be published.