ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ – ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ, ಹಾವೇರಿ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ್ ಪೂಜಾರ್ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ʻಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ, ದಲಿತ ಯೋಜನೆಗಳ ಮಾಲೀಕ ನೀನಲ್ಲಾ, ದಲಿತ ಸಮುದಾಯ ತುಳಿಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರʼ ಎಂಬ ಘೋಷಣಾ ಫಲಕಗಳನ್ನ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಯೋಜನೆಗಳಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಹಣವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ. ಸಮುದಾಯ ಅಭಿವೃದ್ಧಿಗೆ ಹಿನ್ನಡೆ ಮಾಡಿದ್ದೀರಿ ಎಂದು ಕಿಡಿ ಕಾರಿದರು. ಪ್ರತಿಭಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

You might also like
Leave A Reply

Your email address will not be published.