ಜಗದೀಶ್ ಶೆಟ್ಟರ್ ಮರಳಿ ಗೂಡಿಗೆ

ಅಯೋಧ್ಯೆಯಲ್ಲಿ ರಾಮನ ಆಗಮನವಾಗುತ್ತಿದ್ದಂತೆ ಪಕ್ಷ ಬಿಟ್ಟೊದವರೆಲ್ಲ ಮರಳಿ ತಮ್ಮ ತಮ್ಮ ಗೂಡು ಸೇರಿಕೊಳ್ಳಲಾರಂಭಿಸಿದ್ದಾರೆ. ರಾಜಕೀಯವಾಗಿ ಎಷ್ಟೇ ಪಕ್ಷ ಬದಲಾಯಿಸಿದರು ತಮ್ಮ ಸೈದಾಂತಿಕ ನಿಲುವುಗಳನ್ನು ಬದಲಾಯಿಸಲು ಸಾಧ್ಯವೇ?

ಹೌದು! ಇತ್ತೀಚೆಗಷ್ಟೇ ಬಿಜೆಪಿಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ತವರು ಮನೆ ಬಿಜೆಪಿಗೆ ಮರುಸೇರ್ಪಡೆಯಾಗುವ ಮುಖೇನ ಕಾಂಗ್ರೆಸ್’ಗೆ ಬಿಗ್ ಶಾಕ್ ನೀಡಿದ್ದಾರೆ.

ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.

ಬಿಜೆಪಿಗೆ ವಾಪಸ್ ಬರುವಂತೆ ಜಗದೀಶ್ ಶೆಟ್ಟರ್ಗೆ ಯಡಿಯೂರಪ್ಪ ಅವರು ಆಹ್ವಾನ ಕೊಟ್ಟಿದ್ದರು. ಈ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು, ವರಿಷ್ಠರನ್ನ ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು. ನಾನು ಓಪನ್ ಆಗಿದ್ದೀನಿ. ಆದರೆ ಬಿಜೆಪಿಯ ನಂಬರ್ 1, 2 ಒಪ್ಪಿಗೆ ಕೊಟ್ಟು ಮಾತನಾಡಬೇಕು. ಮೋದಿ, ಅಮಿತ್ ಶಾ ಜೊತೆ ಮಾತಾನಾಡಿಸಬೇಕು. ಅಲ್ಲೇ ಮಾತುಕತೆ ಆಗಬೇಕು ಎಂದು ಶೆಟ್ಟರ್ ಹೇಳಿದ್ದರು. ಈ ಹಿನ್ನೆಲೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸರ್ಕಸ್ ನಡೆಸಿ ಮಾತುಕತೆಗೆ ಒಪ್ಪಿಸಿದ್ದರು.

ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಈ ವೇಳೆ ಹಾವೇರಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವ ಭರವಸೆಯನ್ನು ಹೈಕಮಾಂಡ್ ನೀಡಿದೆ.

You might also like
Leave A Reply

Your email address will not be published.