ಸುರಪುರ ವಿಧಾನಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ರಾಜುಗೌಡ ಕಣಕ್ಕೆ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನರಸಿಂಹನಾಯಕ (ರಾಜುಗೌಡ)ರನ್ನು ಆಯ್ಕೆ ಮಾಡಲಾಗಿದೆ.

2023 ರಲ್ಲಿ ನಡೆದಿದ್ದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿಜಯ ಸಾಧಿಸಿದ್ದ ರಾಜಾ ವೆಂಕಟಪ್ಪ ನಾಯಕರು ಇದೇ ಪೆ.25 ರಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಲೋಕಸಭೆಯೊಂದಿಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿತ್ತು.

ರಾಜ್ಯ ವಿಧಾನಸಭಾ ಚುನಾವಣೆ-2023 ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪನವರ ವಿರುದ್ಧ ಸ್ಪರ್ಧಿಸಿದ್ದ ನರಸಿಂಹ ನಾಯಕ (ರಾಜು ಗೌಡ) ಅವರು 20 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಇದೀಗ, ರಾಜುಗೌಡರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಮತದಾನದ ದಿನ ಮೇ 07ರಂದೇ ಸುರಪುರ ವಿಧಾನಸಭೆಯ ಚುನಾವಣೆಯೂ ನಡೆಯಲಿದೆ.

Surpur Assembly by-election: Rajugowda as BJP candidate

ಕಾಂಗ್ರೆಸ್ ಅಭ್ಯರ್ಥಿಯೂ ಆಯ್ಕೆ :

ದಿವಂಗತ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ್ ರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಘೋಷಿಸಿದೆ. ರಾಜಾ ವೆಂಕಟಪ್ಪ ನಾಯಕರ ನಿಧನರಾದ ಹಿನ್ನೆಲೆ ಅವರ ಪುತ್ರನಿಗೆ ಟಿಕೆಟ್ ನೀಡಿ, ಸಿಂಪತಿಯ ಮತ ಗಳಿಕೆಯಲ್ಲಿ ಕಾಂಗ್ರೆಸ್ ಇದೆ.

ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನೇರಾನೇರ ಪೈಪೋಟಿ ನಡೆಸಲಿವೆ. ಜೊತೆಗೆ, ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್‌ ಕೂಡ ಮೈತ್ರಿ ಮಾಡಿಕೊಂಡಿದ್ದು, ಇದು ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರಿಗೆ ಪ್ಲಸ್‌ ಪಾಯಿಂಟ್ ಆಗಿದೆ.

You might also like
Leave A Reply

Your email address will not be published.