ಮೋದಿ ವಿಷ್ಣುವಿನ ಅವತಾರ ಎಂದ ಖರ್ಗೆ

ಲೋಕಸಭೆ ಚುನಾವಣೆಯಲ್ಲಿ ಧರ್ಮದ ಹೆಸರಿನಲ್ಲಿ ಬಿಜೆಪಿ ಗೆಲ್ಲಲು ಪ್ರಯತ್ನಿಸುತ್ತಿದೆ. ಅದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅವರು ವಿಷ್ಣುವಿನ 11ನೇ ಅವತಾರವಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಭಾನುವಾರ ಇಲ್ಲಿನ ಬನ್ನು ಶಾಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ ಕಿತ್ತೊಗೆಯಬೇಕು ಎಂದು ಜನತೆಗೆ ಕರೆ ನೀಡಿದರು.

ಕಾಂಗ್ರೆಸ್ ನಾಯಕರು ದೇಶಕ್ಕಾಗಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಮುಡಿಪಿಟ್ಟಿದ್ದಾರೆ. ಆದರೆ ಬಿಜೆಪಿ ಅವರು ಎಂದಿಗೂ ಅಂತಹ ತ್ಯಾಗ ಮಾಡಿಲ್ಲ. ದೇಶವನ್ನು ಒಗ್ಗೂಡಿಸಲು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ನೆಹರು ಸ್ವಾತಂತ್ರ್ಯಕ್ಕಾಗಿ ಜೈಲುವಾಸ ಅನುಭವಿಸಿದ್ದರು. ಆದರೆ ಬಿಜೆಪಿ ಏನು ಮಾಡಿದೆ? ಎಂದು ಖರ್ಗೆ ಪ್ರಶ್ನಿಸಿದರು.

You might also like
Leave A Reply

Your email address will not be published.