ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ – ನಿಷೇಧಾಜ್ಞೆ ಜಾರಿ

ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ (ಮಾ.28) ಆರಂಭವಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಾಗಾದರೆ ಏನೆಲ್ಲ ಚಟುವಟಿಕೆಗಳಿಗೆ ನಿರ್ಬಂಧನೆ ಏರಲಾಗಿದೆ? ಎಂಬುದರ ಕುರಿತಾದ ಮಾಹಿತಿ ಇಲ್ಲಿದೆ.

ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗುವ ಸಾಧ್ಯತೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ ಮಾ.28 ರಿಂದ ಏ.8ರವರೆಗೆ ಚುನಾವಣಾಧಿಕಾರಿಗಳ ಕಚೇರಿಯ 100 ಮೀ. ಸುತ್ತಾ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

Nomination Paper Submission Begins From Today - Prohibitory Order Enforced

ನಿಷೇಧಾಜ್ಞೆ ನಿಬಂಧನೆಗಳು

• ಕಾನೂನು ಸುವ್ಯವಸ್ಥೆ ಭಂಗವುಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು
• ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧ್ವನಿವರ್ದಕಗಳು ಬಳಸುವಂತಿಲ್ಲ
• ಶಸ್ತ್ರಾಸ್ತ್ರಗಳನ್ನು, ದೊಣ್ಣೆಗಳನ್ನು ಕತ್ತಿಗಳನ್ನು, ಈಟೆಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಾಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ತರುವಂತಿಲ್ಲ.
• ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳು ಅಥವಾ ಉಪಕರಣೆಗಳನ್ನು ತರುವಂತಿಲ್ಲ, ಶೇಖರಿಸಬಾರದು
• ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನ ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ.

You might also like
Leave A Reply

Your email address will not be published.