ಬಜೆಟ್ – ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 9 ರಿಂದ 14 ವಯಸ್ಸಿನ ಬಾಲಕಿಯರಿಗೂ ಲಸಿಕೆ ನೀಡಲು ಬಜೆಟ್‌ ನಲ್ಲಿ ಅನುದಾನ

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ 9 ರಿಂದ 14 ವಯಸ್ಸಿನ ಬಾಲಕಿಯರಿಗೂ ಲಸಿಕೆ ನೀಡಲು ಬಜೆಟ್‌ ನಲ್ಲಿ ಅನುದಾನ ಮೀಸಲಿಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಗರ್ಭಕಂಠದ ಕ್ಯಾನ್ಸ‌ರ್ ಪ್ರಕರಣಗಳು ಜಾಗತಿಕ ಮಟ್ಟಕ್ಕೆ ಹೋಲಿಸಿದಲ್ಲಿ ಭಾರತದಲ್ಲಿ ತುಸು ಹೆಚ್ಚಾಗೆ ಇದೆ. ಗರ್ಭಕಂಠ ಕ್ಯಾನ್ಸರ್‌ನಿಂದ ಸಾವು ಸಂಭವಿಸುವ ಪ್ರಮಾಣ ಜಾಗತಿಕ ಮಟ್ಟದಲ್ಲಿ ಶೇ.1 ರಷ್ಟಿದ್ದರೆ, ಭಾರತದಲ್ಲಿ ಅದು ಶೇ.1.6 ರಷ್ಟಿದೆ.

Budget - Grants in the budget to vaccinate girls aged 9 to 14 to prevent cervical cancer.

ಇತ್ತೀಚಿನ ವರದಿ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 80 ಸಾವಿರ ಮಹಿಳೆಯರು ಗರ್ಭಕಂಠದ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ, 35 ಸಾವಿರ ಮಹಿಳೆಯರು ಇದರಿಂದ ಮೃತಪಡುತ್ತಿದ್ದಾರೆ.

ಪ್ರಸ್ತುತ ಭಾರತದ ಸೀರಮ್ ಇನ್‌ಸ್ಟಿಟ್ಯೂಟ್ ತಯಾರಿಸಿದ CERVAVAC ಲಸಿಕೆ ಖಾಸಗಿಯಾಗಿ ಮಾರುಕಟ್ಟೆಯಲ್ಲಿ ದೊರೆಯುತ್ತಿದೆ. ಇದರ ಬೆಲೆ ಒಂದು ಡೋಸ್‌ಗೆ 2 ಸಾವಿರ ರೂಪಾಯಿ ಇದೆ.

ಕಳೆದ ತಿಂಗಳು ಕೇಂದ್ರ ಆರೋಗ್ಯ ಸಚಿವಾಲಯವು ಗರ್ಭಕಂಠದ ಕ್ಯಾನ್ಸ‌ರ್ ಕುರಿತು ಸೂಕ್ಷ್ಮವಾಗಿ ಗಮನಹರಿಸಿದ್ದು, ದೇಶದ ಎಲ್ಲಾ ರಾಜ್ಯ ಮತ್ತು ಆರೋಗ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದರು.

You might also like
Leave A Reply

Your email address will not be published.