Interim Budget 2024: ಅಂಗನವಾಡಿ, ಆಶಾಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ

2024ನೇ ಸಾಲಿನ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಇದೊಂದು ಸ್ವಾಗತಾರ್ಹ ಲೆಕ್ಕಾಚಾರ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ಇದರೊಂದಿಗೆ ಬಜೆಟ್ ಅಲ್ಲಿ ಅಂಗನವಾಡಿ, ಆಶಾಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ ಮಾಡುವ ಮೂಲಕ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಏನಿದು AB-PMJAY ಯೋಜನೆ? ಇದರಿಂದ ಆಗುವ ಲಾಭಗಳೇನು?

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ-ಜನ ಆರೋಗ್ಯ ಯೋಜನೆ (AB-PMJAY) ವಿಶ್ವದ ಅತಿದೊಡ್ಡ ಸಾರ್ವಜನಿಕವಾಗಿ ನಿಧಿಯ ಆರೋಗ್ಯ ವಿಮಾ ಯೋಜನೆ ಆಗಿದ್ದು, ಪ್ರತಿ ವರ್ಷ 5 ಲಕ್ಷದವರೆಗಿನ ಕುಟುಂಬಗಳು ಈ ಯೋಜನೆಯಡಿ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆಯುತ್ತಾರೆ. ಕಳೆದ ವರ್ಷ ಡಿಸೆಂಬರ್ 27 ರವರೆಗೆ 12 ಕೋಟಿ ಕುಟುಂಬಗಳ 55 ಕೋಟಿ ಜನರು ಈ ಯೋಜನೆಯ ಲಾಭ ಪಡೆದುಕೊಂಡಿರುವುದು ಸ್ವಾಗತರ್ಹ.

AB-PMJAY

ಬಡವರನ್ನು ಕೇಂದ್ರಿಕರಿಸಿಕೊಂಡ ಕೇಂದ್ರ ಸರ್ಕಾರ ಈ ಯೋಜನೆಯಡಿ ದೇಶದ ಸರ್ಕಾರಿ ಮತ್ತು ಕೆಲವು ಖಾಸಗಿ ಆಸ್ಪತ್ರೆಗಳನ್ನು ಸೇರಿಸಿತು. ಅಲ್ಲದೇ ಈ ಯೋಜನೆಯಡಿ ರೋಗಿಯು ಆಸ್ಪತ್ರೆಗೆ ದಾಖಲಾದರೆ 5 ಲಕ್ಷದವರೆಗೆ ಚಿಕಿತ್ಸೆಯು ಸಂಪೂರ್ಣ ಉಚಿತವಾಗಿರುತ್ತದೆ. ಆಸ್ಪತ್ರೆಗೆ ದಾಖಲಾಗುವುದಕ್ಕೂ ಮೊದಲ ಒಂದು ವಾರ ಮತ್ತು ಡಿಸ್ಚಾರ್ಜ್ ಆದ ನಂತರ 10 ದಿನಗಳವರೆಗೆ ನಡೆಸಿರುವ ಎಲ್ಲಾ ಪರೀಕ್ಷೆಗಳ ವೆಚ್ಚವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ. ಕ್ಯಾನ್ಸರ್, ಕಿಡ್ನಿ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ಈ ಯೋಜನೆಯಡಿ ಚಿಕಿತ್ಸೆ ನೀಡಲಾಗುತ್ತದೆ.

ಈ ಯೋಜನೆಯಡಿ ಮೊದಲು ಅಂಗನವಾಡಿ, ಮತ್ತು ಆಶಾಕಾರ್ಯಕರ್ತೆಯರಿಗೆ ಪ್ರಯೋಜನ ಇರಲಿಲ್ಲ. ಇದೀಗ ಅವರನ್ನು ಆಯುಷ್ಮಾನ್ ಭಾರತ್ ವಿಸ್ತರಣೆ ಮಾಡುವ ಮೂಲಕ ವಿಶೇಷ ಕೊಡುಗೆಯನ್ನು ನೀಡಿರುವುದು ವಿಶೇಷನೀಯ.

You might also like
Leave A Reply

Your email address will not be published.