ಮಧ್ಯಂತರ ಬಜೆಟ್ ಕುರಿತು ಪ್ರಧಾನಿ ಮೋದಿ ಅವರು ಹೇಳಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಮಧ್ಯಂತರ ಬಜೆಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟು ಅತ್ಯುತ್ತಮ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ್ ಹಾಗೂ ಇಡೀ ತಂಡಕ್ಕೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಇದೇ ವೇಳೆ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಇದು ದೇಶದ ಅಭಿವೃದ್ಧಿಗೆ ಪೂರಕವಾದ ಸಮಗ್ರ ಬಜೆಟ್ ಎಂದು ಮೋದಿ ಬಣ್ಣಿಸಿದ್ದಾರೆ. ಇದು ಮಧ್ಯಂತರ ಬಜೆಟ್ ಆಗಿದ್ದು, ಎಲ್ಲರನ್ನೂ ಒಳಗೊಂಡ, ಅಭಿವೃದ್ಧಿ ಹಾಗೂ ವಿಕಸಿತ ಭಾರತ ಬಜೆಟ್ ಆಗಿದೆ. ಈ ಬಜೆಟ್ನಲ್ಲಿ ಯೋಜನೆಗಳನ್ನು ಮುಂದುವರಿಸುವ ಭರವಸೆ ಇದೆ. ವಿಕಸಿತ ಭಾರತದ ನಾಲ್ಕು ಸ್ಥಂಬಗಳಾಗಿರುವ ರೈತರು, ಮಹಿಳೆ, ಯುವ ಹಾಗೂ ಬಡವರನ್ನು ಸಬಲೀಕರಣ ಮಾಡುವಲ್ಲಿ ತೆಗೆದುಕೊಂಡ ತೀರ್ಮಾನ ಅದ್ವಿತೀಯ. ನಿರ್ಮಲಾ ಸೀತಾರಾಮನ್ ಮಂಡಿಸಿದ ಈ ಬಜೆಟ್ ದೇಶದ ಭವಿಷ್ಯ ರೂಪಿಸುವ ಬಜೆಟ್ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

2047ರ ವಿಕಸಿತ ಭಾರತಕ್ಕೆ ಪೂರಕವಾದ ಬಜೆಟ್ ಆಗಿದೆ. ಸಮಾಜದ ಪ್ರತಿ ಕ್ಷೇತ್ರಗಳಿಗೆ ಈ ಬಜೆಟ್ ತಲುಪಿದೆ. ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿ ಇಡಲಾಗಿದೆ. ಬಜೆಟ್ನಲ್ಲಿ 40 ಸಾವಿರ ವಂದೇ ಭಾರತ್ ಆಧುನಿಕ ಬೋಗಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಬಡವರಿಗೆ ಈಗಾಗಲೇ 3 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ಇದೀಗ ಮತ್ತೆರೆಡು ಕೋಟಿ ಮನೆ ನಿರ್ಮಾಣ ಮಾಡುತ್ತಿದ್ದೇವೆ. ಲಕ್ ಪತಿ ದೀದಿಯಲ್ಲಿ ಮತ್ತೆ 3 ಕೋಟಿ ಮಹಿಳೆಯರು ಯೋಜನೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅಂಗನವಾಡಿ ಆಶಾ ಕಾರ್ಯಕರ್ತರೆಗಿ ಆಯುಷ್ಮಾನ್ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದು ಸ್ವೀಟ್ ಸ್ಪಾಟ್ ಬಜೆಟ್ ಎಂದು ಮೋದಿ ಬಣ್ಣಿಸಿದ್ದಾರೆ. ಯುವ ಸಮೂಹಕ್ಕೆ ಉದ್ಯೋಗ ಒದಗಿಸುವ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಈ ಬಜೆಟ್ ಭಾರತದ ಯುವ ಸಮೂಹದ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ. ಎರಡು ಮಹತ್ವಪೂರ್ಣ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ನಾವೀನ್ಯತೆಗೆ 1 ಲಕ್ಷ ಕೋಟಿ ರೂಪಾಯಿ ಬಂಡವಾಳ ತೆಗೆದಿಡಲಾಗಿದೆ. ಸ್ಟಾರ್ಟ್ ಅಪ್ ಕ್ಷೇತ್ರದಲ್ಲಿ ಮತ್ತಷ್ಟು ಹೂಡಿಕೆಗೆ ವಿಪುಲ ಅವಕಾಶ ಮಾಡಿಕೊಡಲಾಗಿದೆ ಎಂದು ಮೋದಿ ಹೇಳಿದ್ದಾರೆ.

 

You might also like
Leave A Reply

Your email address will not be published.