ಮಮತಾ ಬ್ಯಾನರ್ಜಿ ವಿರುದ್ಧ ಶಪಥಗೈದ ಕಾಂಗ್ರೆಸ್‌ ನಾಯಕ ಬಿಜೆಪಿಗೆ ಸೇರ್ಪಡೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿದ್ದ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಒಂದು ದಿನದ ಹಿಂದೆ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು. ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ್ದರು.

ಬಿಜೆಪಿಗೆ ಕೌಸ್ತವ್ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಕೂಡ ಉಪಸ್ಥಿತರಿದ್ದರು.

Congress leader who took oath against Mamata Banerjee joins BJP

ಪಕ್ಷದ ಇತರರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಬಾಗ್ಚಿ ಬುಧವಾರ ಕಾಂಗ್ರೆಸ್ʼಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ (2023) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

You might also like
Leave A Reply

Your email address will not be published.