ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತೆ : ಸಚಿವ ದಿನೇಶ್‌ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಜಿಲ್ಲಾಡಳಿತದ ಬಳಿ ಬರ ಪರಿಹಾರ ನಿಧಿಯಡಿ 3 ಕೋಟಿ ರೂ. ಅನುದಾನ ಇದೆ. ಅಗತ್ಯ ಬಿದ್ದರೆ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಬೇಸಿಗೆ ಸಂದರ್ಭದಲ್ಲಿ ನೀರು ಪೂರೈಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾದರೆ ಅದನ್ನು ನಿಭಾಯಿಸಲು ಅಧಿಕಾರಿಗಳು ಸಿದ್ಧರಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲ ಡ್ಯಾಂಗಳಲ್ಲಿ ಸಾಕಷ್ಟು ನೀರಿದೆ. ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುತ್ತಿದೆ. ಅಗತ್ಯವಿದ್ದರೆ, ಮಂಗಳೂರು ನಗರ, ಉಳ್ಳಾಲ ಮತ್ತು ಮೂಲ್ಕಿಗೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನ ಮೇಲ್ಭಾಗದಲ್ಲಿ ನೆಲೆಗೊಂಡಿರುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ಎಎಂಆರ್ ಅಣೆಕಟ್ಟಿನಿಂದ ನೀರನ್ನು ಪಡೆಯಬೇಕು. ಎಂ.ಆರ್ಪಿ.ಎಲ್, ಎಂ.ಎಸ್.ಇ.ಝಡ್ ಮತ್ತು ಇತರ ಪ್ರಮುಖ ಕೈಗಾರಿಕೆಗಳು ಸಹಕರಿಸಬೇಕು ಎಂದರು.

prevent water problem from escalating in Dakshina Kannada district: Minister Dinesh Gundurao

ಕುಡಿಯುವ ನೀರಿನ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಸಾರ್ವಜನಿಕರು ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ಸ್ಪಂದಿಸಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

You might also like
Leave A Reply

Your email address will not be published.