ಮಂಗಳೂರು ಹಾಗೂ ಬೆಂಗಳೂರು ಬಾಂಬ್‌ ಬ್ಲಾಸ್ಟ್‌ʼನಲ್ಲಿ ಸಾಮ್ಯತೆ -‌ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಬಾಂಬ್ ಬ್ಲಾಸ್ಟ್ ಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಸಾಮ್ಯತೆ ಕಾಣುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಬಿಎಂಟಿಸಿ ಬಸ್‌ʼನಲ್ಲಿ ಬಂದು ಹೋಗಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಗೆ ಪೊಲೀಸರು 7-8 ತಂಡ ರಚನೆ ಮಾಡಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಎಂದರು.

ಬೆಂಗಳೂರಿನ ಜನರು ಆತಂಕಪಡುವ ಅಗತ್ಯವಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರು ಹಾಳು ಮಾಡುವ ಪ್ರಯತ್ನ ನಡೆದಿದೆ. ಬೆಂಗಳೂರನ್ನು ಹಾಳು ಮಾಡುವ ಎಲ್ಲಾ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಏನೇ ರಾಜಕೀಯ ಮಾಡಿಕೊಳ್ಳಲಿ, ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಮಗೆ ಸಹಕಾರ ಕೊಡೋದಾದರೆ ಕೊಡಲಿ, ರಾಜಕೀಯ ಮಾಡುತ್ತಾರೆಂದರೆ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.

ಇದು ಏಕವ್ಯಕ್ತಿ ಮಾಡಿರುವುದಾ ಅಥವಾ ಸಂಘಟನೆ ಮಾಡಿರುವುದಾ ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ ಬ್ಲಾಸ್ಟ್ʼಗೆ ಬಳಸಿರುವ ವಸ್ತುಗಳನ್ನು ನೋಡಿದಾಗ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಸ್ಫೋಟದಲ್ಲಿ ಸಾಮ್ಯತೆ ಇದೆ. ಮಂಗಳೂರು, ಶಿವಮೊಗ್ಗ ಪೊಲೀಸ್ ಅಧಿಕಾರಿಗಳು ಕೂಡ ಬೆಂಗಳೂರಿಗೆ ಬಂದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಸಿಎಂ ಮತ್ತು ಡಿಸಿಎಂ ನಡುವಿರುವ ಬಿರುಕು ಎದ್ದು ಕಾಣಿಸುತ್ತಿದೆ:

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಗೂ ಸಾಮ್ಯತೆ ಇಲ್ಲ ಎಂದಿದ್ದರು. ಈ ಮೂಲಕ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಗಳ ನಡುವೆ ಮಾಹಿತಿ ಕೊರೆತೆ ಇದೆ ಎದ್ದು ಕಾಣುತ್ತಿದೆ.”

Similarities in Mangalore and Bangalore Bomb Blast - DCM DK Shivakumar

ಬಿಬಿಎಂಪಿಯಿಂದ ಗಾಯಾಳುಗಳಿಗೆ ಪರಿಹಾರ

ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸುವ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಏನೇ ಪರಿಹಾರ ಕೊಡುವುದಿದ್ದರೂ ಬಿಬಿಎಂಪಿಯಿಂದ ಕೊಡುತ್ತೇವೆ ಎಂದು ತಿಳಿಸಿದರು.

ಏನಿದು ಪ್ರಕರಣ?

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ 05 ನಿಮಿಷ ಸುಮಾರಿಗೆ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡು ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರೀ ಸ್ಫೋಟದ ಪರಿಣಾಮ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಥಮಿಕ ಹಂತದಲ್ಲಿ ಸಿಲಿಂಡರ್ ಸ್ಫೋಟದಿಂದ ಘಟನೆ ನಡೆದಿದೆ ಎನ್ನಲಾಗಿತ್ತು. ಆದರೆ ಇದೀಗ ಬಾಂಬ್ ಬ್ಲಾಸ್ಟ್ ಆಗಿರುವುದು ಬಯಲಾಗಿದೆ.

ಆರೋಪಿ ಚಹರೆ ಪತ್ತೆ:

ತನ್ನ ಚಹರೆ ಎಲ್ಲೂ ಬೀಳದಿರಲಿ ಅಂತಾ ಶಂಕಿತ ಉಗ್ರ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ತಲೆ ಮೇಲೆ ವೈಟ್ ಹ್ಯಾಟ್ ಹಾಕಿಕೊಳ್ಳುವ ಮೂಲಕ ಮೊದಲೇ ಪ್ರೀ ಪ್ಲಾನ್ ಮಾಡಿಕೊಂಡು ಕೆಫೆಗೆ ಎಂಟ್ರಿ ಕೊಟ್ಟಿದ್ದಾನೆ.

ಜೊತೆಗೆ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ಹೋಟೆಲ್ ಗೆ ಬಂದಿರುವ ಆರೋಪಿ ಹೋಟೆಲ್ ನಲ್ಲಿ ತಿಂಡಿ ತಿಂದು ಸಾಗುವ ದೃಶ್ಯಗಳು ಸಿಕ್ಕಿವೆ.

ಟೋಕನ್ ತೆಗೆದುಕೊಂಡ ಶಂಕಿತ ರವೆ ಇಡ್ಲಿ ತಿಂದು ಹ್ಯಾಡ್ ವಾಶಿಂಗ್ ಗೆ ಹೋಗಿದ್ದಾನೆ. ಹ್ಯಾಂಡ್ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್ ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಈ ಬ್ಯಾಗ್ ಬ್ಲಾಸ್ಟ್ ಆಗಿದೆ. ಸದ್ಯ ಬೈಕ್ ಮಾಲೀಕ ಯಾರು..? ಬೈಕ್ ಎಲ್ಲಿಯದ್ದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You might also like
Leave A Reply

Your email address will not be published.