ಬಿಸಿಲ ಧಗೆ ಹೆಚ್ಚಳ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಉಷ್ಣ ಮಾರುತ

ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಹೆಚ್ಚಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ.

ತಾಪಮಾನ ಹೆಚ್ಚಳದಿಂದ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ. ದೇಶದ 23 ರಾಜ್ಯಗಳು ಉಷ್ಣ ಹವೆಯ ಪರಿಣಾಮ ಎದುರಿಸಲು ಕ್ರಿಯಾ ಯೋಜನೆ ರೂಪಿಸಿಕೊಂಡಿದೆ ಎಂದು ತಿಳಿಸಿದೆ.

ಉಷ್ಣಾಂಶ ಹೆಚ್ಚಳದಿಂದ ವಿದ್ಯುತ್ ಗ್ರಿಡ್’ಗಳು, ಸಾರಿಗೆ ವ್ಯವಸ್ಥೆಯ ಮೇಲೆ ಹೆಚ್ಚಿನ ಒತ್ತಡ ಬೀಳುವ ಸಾಧ್ಯತೆ ಇದೆ. ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಲು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

Increase in heat wave: Heat wave in 9 states including Karnataka

ಯಾವ ಯಾವ ಸ್ಥಳಗಳಲ್ಲಿ ತಾಪಮಾನ ಏರಲಿದೆ?

ಏಪ್ರಿಲ್ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿಉಷ್ಣ ಹವೆ ಹೆಚ್ಚಲಿದೆ. ಏಪ್ರಿಲ್-ಜೂನ್ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಇರಲಿದೆ ’ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಮಾಹಿತಿ ನೀಡಿದ್ದಾರೆ.

You might also like
Leave A Reply

Your email address will not be published.