ಬಿಸಿಲಿನ ಬೇಗೆಗೆ ಬೇಸತ್ತಿದ್ದೀರಾ? – ಈ ರಾಜ್ಯಗಳಲ್ಲಿ ತಂಪೆರೆಯಲಿದ್ದಾನೆ ವರುಣ

ಭಾರತದಲ್ಲಿ ಪೂರ್ವದಿಂದ ಉತ್ತರ ಮತ್ತು ದಕ್ಷಿಣದಿಂದ ಪಶ್ಚಿಮ ಭಾಗದವರಿಗೆ ಬಿಸಿ ಶಾಖದ ಅನುಭವವಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ. ಈ ಬಿಸಿ ಶಾಖದಿಂದ ಜನರು ಬೇಸತ್ತು ಹೋಗಿದ್ದಾರೆ. ಈ ನಡುವೆ ಕೆಲ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಅಲ್ಲಿಯ ಭಾಗದ ಜನರಲ್ಲಿ ಮಂದಹಾಸ ಮೂಡಿದೆ. ಅಷ್ಟಕ್ಕೂ ಯಾವ್ಯಾವ ರಾಜ್ಯಗಳಲ್ಲಿ ಮಳೆ ಬರಲಿದೆ? ಎಂಬಿತ್ಯಾದಿ ಕುರಿತಾದ ಮಾಹಿತಿ ಇಲ್ಲಿದೆ.

ಸ್ಕೈಮೆಟ್ ಹವಾಮಾನದ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಲಘು ಮಳೆ ಮತ್ತು ಚದುರಿದ ಹಿಮಪಾತವಾಗಬಹುದು.

ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತದ ಕೆಲವೆಡೆ ಲಘು ಮಳೆಯಾಗಬಹುದು.

Tired of sunburn? - Rains soon in these states

ದೇಶದ ಉಳಿದ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಮಧ್ಯಪ್ರದೇಶ, ವಿದರ್ಭ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ಸಾಮಾನ್ಯ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಕೇಂದ್ರದ ಮುಖ್ಯಸ್ಥರು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಒಡಿಶಾ, ಉತ್ತರ ಛತ್ತೀಸ್‌ಗಢ, ಜಾರ್ಖಂಡ್, ದಕ್ಷಿಣ ಪಶ್ಚಿಮ ಬಂಗಾಳ, ಈಶಾನ್ಯದ ಕೆಲವು ಭಾಗಗಳು, ಆಂಧ್ರಪ್ರದೇಶದ ರಾಯಲಸೀಮಾ ಮತ್ತು ಕೇರಳದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ, ಮೇ ತಿಂಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರಬಹುದು ಮತ್ತು ಶಾಖದ ಅಲೆಯು ಎರಡರಿಂದ ನಾಲ್ಕು ದಿನಗಳವರೆಗೆ ಇರುತ್ತದೆ.

ಈಶಾನ್ಯ ಭಾರತ, ವಾಯುವ್ಯ ಭಾರತ, ಮಧ್ಯ ಭಾರತದ ಕೆಲವು ಭಾಗಗಳು ಮತ್ತು ಈಶಾನ್ಯ ಭಾಗಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢದ ಕೆಲವು ಭಾಗಗಳು, ಆಂತರಿಕ ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದ ಗಂಗಾ ಬಯಲು ಮತ್ತು ಇತರ ಪ್ರದೇಶಗಳಲ್ಲಿ ಶಾಖದ ಅಲೆಯು ಸುಮಾರು ಎರಡರಿಂದ ನಾಲ್ಕು ದಿನಗಳವರೆಗೆ ಇರುತ್ತದೆ ಎಂದು ಮೊಹಾಪಾತ್ರ ಹೇಳಿದ್ದಾರೆ.

ಸದ್ಯ ಕರ್ನಾಟಕದಲ್ಲಿ ಬಿಸಿಲಿನ ಶಾಖ ಹೆಚ್ಚುತ್ತಿದ್ದು, ಹಗಲು ಹೊತ್ತಿನಲ್ಲಿ ಅನಗತ್ಯವಾಗಿ ಹೊರಗೆ ಬರದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಶಾಖದ ತೀವ್ರತೆಗೆ ಮೈಸೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಒಟ್ಟಾರೆಯಾಗಿ ನಮ್ಮ ರಾಜ್ಯದಲ್ಲಿ ಮಳೆ ಬಂದರೆ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಕ್ಕಂತಾಗುತ್ತದೆ.

You might also like
Leave A Reply

Your email address will not be published.