ಸಿದ್ದಗಂಗಾ ಮಠದಲ್ಲಿ ಅನಾಥ ಮಕ್ಕಳ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ – ಹೀಗೆ ಅರ್ಜಿ ಸಲ್ಲಿಸಿ

ಪ್ರತಿವರ್ಷದಂತೆ ಈ ವರ್ಷವೂ ಸಿದ್ಧಗಂಗಾ ಮಠವು ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಅನಾಥ ಮಕ್ಕಳ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿಗೆ ಬೇಕಾಗಿರುವ ದಾಖಲಾತಿಗಳು ಯಾವುವು? ಅರ್ಜಿ ಸಲ್ಲಿಸುವುದು ಹೇಗೆ? ಎಂಬಿತ್ಯಾದಿ ಮಾಹಿತಿಗಳು ಇಲ್ಲಿ ಲಭ್ಯ. ತಪ್ಪದೇ ಓದಿ.

ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಸೇರಬಯಸುವವರು ಮೇ 15 ರಂದು ಅರ್ಜಿ ಪಡೆಯಲು ಕೊನೆಯ ದಿನವಾಗಿದೆ. ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಹೊಸದಾಗಿ 3ನೇ ತರಗತಿಯಿಂದ 6ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶವಿರುತ್ತದೆ.

ಆಂಗ್ಲ ಮಾಧ್ಯಮದಲ್ಲಿ ವಿದ್ಯಾಭ್ಯಾಸಕ್ಕೂ ಅವಕಾಶ

ಗ್ರಾಮೀಣ ಬಡ ಕುಟುಂಬದ ವಿದ್ಯಾರ್ಥಿಗಳು ಖುದ್ದಾಗಿ ಬಂದು ಶ್ರೀಮಠದ ಲೆಕ್ಕಪತ್ರ ವಿಭಾಗದಲ್ಲಿ ಪ್ರವೇಶ ಅರ್ಜಿಯನ್ನು ಪಡೆಯಬೇಕಾಗಿದೆ. 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಆಂಗ್ಲ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶವಿರುತ್ತದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಆದ್ಯತೆಯನ್ನು ಕೊಡಲಾಗುವುದು.

ಆದಾಯ ಪ್ರಮಾಣ ಪತ್ರ ಕಡ್ಡಾಯ

ಸರಿಯಾಗಿ ಭರ್ತಿ ಮಾಡಿದ ಪ್ರವೇಶದ ಅರ್ಜಿಯ ಜೊತೆಗೆ ಆಯಾ ತಾಲೂಕಿನ ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ ಧೃಡೀಕರಿಸಲ್ಪಟ್ಟ ವಿದ್ಯಾರ್ಥಿಯ ವಾರ್ಷಿಕ ವರಮಾನದ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಉಳಿದ ಮಾಹಿತಿಯೊಂದಿಗೆ ಪ್ರವೇಶವನ್ನು ಅಪೇಕ್ಷಿಸುವ ವಿದ್ಯಾರ್ಥಿಗಳು ಜೂನ್ 1ರಿಂದ ಜೂನ್ 10ರವರೆಗೆ ನಡೆಯುವ ಸಂದರ್ಶನದ ವೇಳೆಯಲ್ಲಿ ಖುದ್ದಾಗಿ ಬಂದು ಅಧ್ಯಕ್ಷರ ಸಂದರ್ಶನವನ್ನು ಪಡೆಯಬೇಕು. ಪ್ರತ್ಯೇಕವಾದ ಸಂದರ್ಶನದ ಪತ್ರಗಳನ್ನು ಕಳುಹಿಸಿ ಕೊಡಲಾಗುವುದಿಲ್ಲ.

Application Invitation for Free Admission of Orphan Children in Siddaganga Math

ಅರ್ಜಿ ಸಲ್ಲಿಸಲು ಏನೇನು ಬೇಕು?

ಅನಾಥಾಲದ ಪ್ರವೇಶಕ್ಕೆ ಅರ್ಜಿ ಬಯಸುವ ವಿದ್ಯಾರ್ಥಿಗಳು ಜಾತಿ ಹಾಗೂ ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಕೊಡಬೇಕಾಗಿದೆ.

ಶಾಲೆಯ ದಾಖಲಾತಿಗೆ ಏನೇನು ಬೇಕು?

ಪ್ರತ್ಯೇಕವಾಗಿ ಶಾಲೆಯ ಅರ್ಜಿಗೆ ಇಷ್ಟು ಜೆರಾಕ್ಸ್ ಪ್ರತಿಗಳನ್ನು ನೀಡಬೇಕಾಗಿದೆ. ಶಾಲಾ ಡೈಸ್ ಸಂಖ್ಯೆ, ವಿದ್ಯಾರ್ಥಿಯ ಐಡಿ ಸಂಖ್ಯೆ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಜೆರಾಕ್ಸ್, ವಿದ್ಯಾರ್ಥಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರದ ಜೆರಾಕ್ಸ್, ವಿದ್ಯಾರ್ಥಿಯ ಬ್ಯಾಂಕ್ ಖಾತೆ ಜೆರಾಕ್ಸ್, ತಂದೆ, ತಾಯಿ ಆಧಾರ್ ಕಾರ್ಡ್ ಜೆರಾಕ್ಸ್, ಆಹಾರ ಪಡಿತರ ಕಾರ್ಡ್ ಜೆರಾಕ್ಸ್, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಮೂಲ ಆನ್ ಲೈನ್ ಟಿ.ಸಿ ಮತ್ತು ಅಂಕಪಟ್ಟಿ ಜೆರಾಕ್ಸ್ ತರಬೇಕಾಗಿದೆ.

You might also like
Leave A Reply

Your email address will not be published.