GST ವಂಚನೆ – ಯಾವ ರಾಜ್ಯದಲ್ಲಿ ಎಷ್ಟು ಪ್ರಕರಣಗಳು?

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಧಿಕಾರಿಗಳು 2023ರ ಏಪ್ರಿಲ್‌ ನಿಂದ ಡಿಸೆಂಬರ್‌ ವರೆಗೆ 14,597 ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಯಾವ ಯಾವ ರಾಜ್ಯದಲ್ಲಿ ಎಷ್ಟೆಷ್ಟು ಪ್ರಕರಣಗಳು ದಾಖಲು:

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕದಲ್ಲಿ ಒಟ್ಟು 2,716 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಗುಜರಾತ್ 2,589, ಹರಿಯಾಣ 1,123 ಹಾಗೂ ಪಶ್ಚಿಮ ಬಂಗಾಳದಲ್ಲಿ 1,089 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ.

GST Fraud - How many cases in which state?

ಕೃತಕ ಬುದ್ದಿಮತ್ತೆ ಸಾಧನಗಳ ಬಳಕೆಯಿಂದ ತೆರಿಗೆದಾರರು ಪತ್ತೆ:

ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಕಲಿ ಇನ್‌’ವಾಯ್ಸ್ ಸೃಷ್ಟಿಸಿ ಜಿಎಸ್‌’ಟಿ ಇನ್‌’ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ವಂಚನೆ ಎಸಗುತ್ತಿದ್ದ ಜಾಲ ಸಕ್ರಿಯವಾಗಿತ್ತು. ದತ್ತಾಂಶ ವಿಶ್ಲೇಷಣೆ ಮೂಲಕ ಕೃತಕ ಬುದ್ಧಿಮತ್ತೆ ಸಾಧನಗಳನ್ನು ಬಳಸಿಕೊಂಡು ಈ ಜಾಲದಲ್ಲಿ ಸಕ್ರಿಯರಾಗಿದ್ದ ತೆರಿಗೆದಾರರನ್ನು ಪತ್ತೆ ಹಚ್ಚುವಲ್ಲಿ ಜಿಎಸ್‌’ಟಿ ಗುಪ್ತಚರ ಮಹಾನಿರ್ದೇಶನಾಲಯದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

You might also like
Leave A Reply

Your email address will not be published.