ಮಂಗನಕಾಯಿಲೆಗೆ ಬಾಲಕಿ ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಂಕಿತ ಮಂಗನಕಾಯಿಲೆಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಬಾಲಕಿಯು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈಕೆಯ ಸಾವಿನಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಈವರೆಗೆ ಒಂಬತ್ತು ಮಂದಿ ಬಲಿಯಾದಂತಾಗಿದೆ. ಸಿದ್ದಾಪುರ ತಾಲೂಕೊಂದರಲ್ಲೇ ಈವರೆಗೆ ಎಂಟು ಮಂದಿ ಬಲಿಯಾಗಿದ್ದು, ಶಿರಸಿಯಲ್ಲೂ ಒಬ್ಬ ವ್ಯಕ್ತಿ ಮಂಗನಕಾಯಿಲೆಗೆ ಈ ವರ್ಷ ಸಾವಿಗೀಡಾಗಿದ್ದಾರೆ. ಈ ವರ್ಷ ಜನವರಿಯಿಂದ ಜಿಲ್ಲೆಯಲ್ಲಿ ಸುಮಾರು 90ಕ್ಕೂ ಹೆಚ್ಚು ಮಂಗನಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ.

Girl dies of Monkeydisease

ನಿಯಂತ್ರಣಕ್ಕೆ ಆದ್ಯತೆ ನೀಡಿ :

ಮಂಗನಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಕೂಡಲೇ ಹೆಚ್ಚಿನ ಗಮನ ಹರಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾ ಉಸ್ತುವಾರಿ ಹರತಾಳು ಹಾಲಪ್ಪ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಯಿಲೆ ಶಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ₹10 ಲಕ್ಷ ಪರಿಹಾರ ಒದಗಿಸಬೇಕು. ಈ ಕಾಯಿಲೆಯಿಂದ ಜೀವಹಾನಿಯಾದರೆ ಅದಕ್ಕೆ ಜಿಲ್ಲಾಡಳಿತ ಹೊಣೆ ಎಂದು ಎಚ್ಚರಿಸಿದರು.

You might also like
Leave A Reply

Your email address will not be published.