ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ – ರಾಜ್ಯದಲ್ಲಿ ಗಾಳಿ ಮಳೆ ನಿರೀಕ್ಷೆ

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ತಮಿಳುನಾಡು, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಮೈಸೂರು, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ.

Cyclone in Bay of Bengal - Wind and rain expected in the state

ಅದರಲ್ಲೂ ಕಳೆದ ದಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ರಾಮನಗರ ಸೇರಿದಂತೆ ಮತ್ತಿತರ ಕಡೆ ಭಾರೀ ಮಳೆ ಸುರಿದಿದೆ.

ಮಂಗಳವಾರದಿಂದಲೇ ದಕ್ಷಿಣ ಕನ್ನಡ, ಉಡುಪಿಯ ಜತೆಗೆ ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಕೊಪ್ಪಳ, ಯಾದಗಿರಿ, ದಾವಣಗೆರೆ, ಕಲಬುರಗಿ, ಬೀದರ್‌ ಸೇರಿದಂತೆ ಮತ್ತಿತರ ಜಿಲ್ಲೆಗಳಿಗೆ ಮಳೆ ವಿಸ್ತರಣೆಯಾಗಲಿದೆ.

ಮೇ 11ರ ನಂತರ ಮಳೆಯ ಪ್ರಮಾಣ ತಗ್ಗಲಿದ್ದು, ಕೆಲ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

You might also like
Leave A Reply

Your email address will not be published.