ಯುವತಿಯ ಗರ್ಭಕೋಶದಲ್ಲಿ ಪತ್ತೆಯಾಯ್ತು 7.5 ಕೆ.ಜಿ ಗಡ್ಡೆ – ಮುಂದೆ ಆಗಿದ್ದೇನು?

ಬೆಂಗಳೂರು ನಗರದ ಯುವತಿಯ ಹೊಟ್ಟೆಯ ಸುತ್ತಳತೆಯ ತೂಕ ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೆಚ್ಚಳವಾದ ಪರಿಣಾಮ ವಿದ್ಯಾರಣ್ಯಪುರ ಸಮೀಪವಿರುವ ಕ್ಯಾನ್ಸರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಯುವತಿಯ ಪೋಷಕರಿಗೆ ದೊಡ್ಡ ಅಚ್ಚರಿಯೇ ಕಾದಿತ್ತು. ಏನದು? ಎಂಬುದ್ದಕ್ಕೆ ಈ ಸ್ಟೋರಿ ಓದಿ.

ಯುವತಿಯನ್ನು ತಕ್ಷಣವೇ ತಪಾಸಣೆ ನಡೆಸಿ ಪರೀಕ್ಷೆಗೊಳಪಡಿಸಿದಾಗ ಗರ್ಭಕೋಶದಲ್ಲಿ 7.5 ಕೆಜಿಯಷ್ಟು ಗಡ್ಡೆ ಇರುವುದು ಪತ್ತೆಯಾಗಿದೆ. ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಹೊರತೆಗೆಯುವಲ್ಲಿ ಡಾ. ಚೈತ್ರಾ ಎಸ್. ನಿರಂತರ, ಡಾ ನಂದ ಕುಮಾರ್ ಮತ್ತು ತಂಡ ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ಯುವತಿ ಆರೋಗ್ಯವಾಗಿದ್ದು ಪೋಷಕರ ಆತಂಕ ದೂರವಾಗಿದೆ.

7.5 kg tumor found in young woman's uterus

19 ವರ್ಷದ ಯುವತಿಯಲ್ಲಿ 7.5 ಕೆಜಿ ತೂಕದ ಗಡ್ಡೆ ಇರುವುದು ತುಂಬಾ ವಿರಳ. ಶಸ್ತ್ರಚಿಕಿತ್ಸೆ ಮಾಡುವುದು ಸ್ವಲ್ಪ ಸವಾಲಿನ ಕೆಲಸವೇ, ಆದರೂ ನಮ್ಮ ವೈದ್ಯಕೀಯ ತಂಡದ ನೆರವಿನಿಂದ ಗಡ್ಡೆಯನ್ನು ಹೊರೆತೆಗೆಯುವಲ್ಲಿ ಯಶಸ್ವಿಯಾಗಿದ್ದೇವೆ. ಯುವತಿ ಆರೋಗ್ಯವಾಗಿದ್ದಾರೆ ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಚೈತ್ರಾ ಎಸ್. ನಿರಂತರ ತಿಳಿಸಿದ್ದಾರೆ.

You might also like
Leave A Reply

Your email address will not be published.