Sudha Murthy : ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ – ಪಿಎಂ ಮೋದಿ

ಕೇಂದ್ರದ ಬಿಜೆಪಿ ಸರ್ಕಾರವು ಶ್ರೀಮತಿ ಸುಧಾಮೂರ್ತಿಯವರನ್ನು (Sudha Murthy) ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದೆ. ಇಂದು ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದು, ರಾಷ್ಟ್ರಪತಿಗಳು ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿ ತಂದಿದೆ ಎಂದು ಹೇಳುವ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಫೌಂಡೇಷನ್‌ನ ಮುಖ್ಯಸ್ಥೆ ಸುಧಾಮೂರ್ತಿ (73) ಅವರು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಧರ್ಮಪತ್ನಿ. ಹಾಗೆಯೇ, ಬ್ರಿಟನ್‌ ದೇಶದ ಪ್ರಧಾನಿಯಾಗಿರುವ ರಿಷಿ ಸುನಕ್‌ ಅವರು ಸುಧಾಮೂರ್ತಿಯವರ ಮಗಳಾದ ಅಕ್ಷತಾ ಮೂರ್ತಿಯವರನ್ನು ವಿವಾಹವಾಗಿದ್ದಾರೆ. ಈ ದಂಪತಿಗೆ ಇಬ್ಬರು ಪುತ್ರಿಯರೂ ಇದ್ದಾರೆ.

ಕೇಂದ್ರ ಸರ್ಕಾರದ ಈ ನಾಮನಿರ್ದೇಶನ ಪ್ರಸ್ತಾವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಸುಧಾಮೂರ್ತಿಯವರನ್ನು (Sudha Murthy) ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿರುವುದು ವಿಶೇಷ.

Sudha Murthy: Nomination of Sudha Murthy to Rajya Sabha – PM Modi

ಸುಧಾಮೂರ್ತಿ (Sudha Murthy) ಅತಿದೊಡ್ಡ ಸ್ಟಾಫ್ಟ್‌ವೇರ್ ಕಂಪನಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಸರಳತೆ, ಸಜ್ಜನಿಕೆಯಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು. ಶಿಕ್ಷಣ ತಜ್ಞರಾಗಿ, ಲೇಖಕಿಯಾಗಿ ಮತ್ತು ಸಮಾಜ ಸೇವಾಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕೊರೋನಾ ಸಾಂಕ್ರಾಮಿಕ ಸಂಕಷ್ಟದ ಸಮಯದಲ್ಲಿ ಇನ್ಪೋಸಿಸ್‌ ಪೌಂಡೇಶನ್‌ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜೊತೆಗೂಡಿ ಕಾರ್ಯನಿರ್ವಹಿಸಿತ್ತು. ಈ ಸಂಸ್ಥೆಯ ಮೂಲಕ ರಾಜ್ಯ ಮಾತ್ರವಲ್ಲದೇ ದೇಶದ ವಿವಿದೆಡೆ ಶಾಲೆಗಳ ನಿರ್ಮಾಣ, ಗ್ರಂಥಾಲಯ ನಿರ್ಮಾಣ, ಬಡವರಿಗೆ ಮನೆಗಳ ನಿರ್ಮಿಸಿಕೊಡುವುದು ಸೇರಿದಂತೆ ಹತ್ತಾರು ಕೆಲಸಗಳು ನಡೆಯುತ್ತಿವೆ. ಸುಧಾಮೂರ್ತಿಯವರ (Sudha Murthy) ಈ ಸೇವೆಯನ್ನು ಮನಗಂಡು ಇವರಿಗೆ 2006ರಲ್ಲಿ ಪ್ರದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

You might also like
Leave A Reply

Your email address will not be published.