ಪ್ರಜ್ವಲ್ ಕಾಮ ಪುರಾಣ – ರಾಜಕೀಯ ನಾಯಕರ ಮಾತಿನ ಸಮರ

ರಾಜ್ಯದಲ್ಲಿ ಇನ್ನೂ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ರಾಜಕೀಯ ತಣ್ಣಗಾಗೋ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ಮಾತಿನ ಸಮರ ನಡೆದಿದ್ದು, ಯಾರ ಯಾರ ನಡುವೆ ಏನೇನು ಮಾತಿನ ಚಕಮಕಿ ನಡೆದಿದೆ ಎಂಬುದನ್ನು ನೋಡೋಣ ಬನ್ನಿ.

ದೇವರಾಜೇಗೌಡ ಬೆನ್ನಲ್ಲೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕೂಡ ಕಾಂಗ್ರೆಸ್‌ ವಿರುದ್ಧ ಸಿಡಿದೆದ್ದಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ. ಅಶ್ಲೀಲ ವಿಡಿಯೋ ರಿಲೀಸ್ ಮಾಡಿದ್ದೇ ಡಿಕೆಶಿ ಎಂದು ಆರೋಪಿಸಿದ್ದಾರೆ.

  Prajwal Revanna case -  War of words of political leaders

ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಕೌಂಟರ್‌ ಕೊಟ್ಟಿದ್ದಾರೆ. ‘ನಮ್ಮ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಜವಾಬ್ದಾರಿ ಇದೆ. ಎಸ್‌ಐಟಿ ತನಿಖೆ ಬಗ್ಗೆ ಅನುಮಾನ ಪಟ್ಟರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಕೇಸ್‌ಗೂ ನನಗೂ ಯಾವುದೇ ಸಂಬಂಧವೇ ಇಲ್ಲ. ಇದು ಬಿಜೆಪಿ-ಜೆಡಿಎಸ್‌ ನಾಯಕರ ರಾಜಕೀಯ ಷಡ್ಯಂತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಬಿಜೆಪಿ ಮುಖಂಡ ದೇವರಾಜೇಗೌಡ ಸುಳ್ಳಿನ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

You might also like
Leave A Reply

Your email address will not be published.