ಪ್ರತಾಪ್‌ ಸಿಂಹಗೆ ಮಿಸ್‌ ಆಗುತ್ತಾ ಮೈಸೂರು ಟಿಕೆಟ್‌ – ವಿಜಯೇಂದ್ರ ಹೇಳಿಕೆ ಬೆನ್ನಲ್ಲೇ ಹಲವು ಅನುಮಾನ

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಎಲ್ಲಾ ಪಕ್ಷಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಸರತ್ತು ನಡೆಯುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಾಪ್ ಸಿಂಹ ಅವರನ್ನು ಕುರಿತು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಷ್ಟಕ್ಕೂ ವಿಜಯೇಂದ್ರ ಹೇಳಿದ್ದಾದರೂ ಏನು?

ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ವಿಜಯೇಂದ್ರ, ನಾಲ್ಕು ಗೋಡೆ ಮಧ್ಯೆ ಅನೇಕ ವಿಚಾರಗಳ‌ ಕುರಿತು ಚರ್ಚೆ ನಡೆಯುತ್ತಲೇ ಇದೆ. ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ತಿಳಿಸಿದ್ದು, ಪರೋಕ್ಷವಾಗಿ ಪ್ರತಾಪ್ ಸಿಂಹ್ ಗೆ ಟಿಕೆಟ್ ಮಿಸ್ ಆಗುವ ಸುಳಿವು ನೀಡಿದರಾ? ಎಂಬ ಅನುಮಾನ ಹಲವರಲ್ಲಿ ಮನೆ ಮಾಡಿದೆ.

ಯಾಕೆಂದರೆ, ಪ್ರತಾಪ್‌ ಸಿಂಹಗೆ ಟಿಕೆಟ್‌ ಬೇಡ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸೇರಿ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಕಾರಣ ಸ್ಥಳೀಯ ನಾಯಕರ ಬೆಳವಣಿಗೆಗೆ ಸಿಂಹ ಕೊಡುಗಡೆ ಏನೂ ಇಲ್ಲ. ಸ್ಥಳೀಯ ನಾಯಕರ ಜೊತೆಗೆ ಬಹಿರಂಗವಾಗಿ ಕಾದಾಡುತ್ತಾರೆ. ಹೀಗಾಗಿ ಹೊಸಬರಿಗೆ ಟಿಕೆಟ್‌ ಕೊಡಿ ಎಂದು ಬಿಎಸ್‌ವೈ ಹೈಕಮಾಂಡ್‌ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದರೊಂದಿಗೆ ಮೈಸೂರಿಗೆ ಯದುವೀರ್ ಒಡೆಯರ್ ಅವರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ಉತ್ತಮ ಹಾಗೂ ಗೆಲ್ಲುವ ಅಭ್ಯರ್ಥಿಯನ್ನು ಲೋಕಸಭೆ ಚುನಾವಣೆಗೆ ಪರಿಚಯಿಸುತ್ತೇವೆ ಎಂದು ತಿಳಿಸುವ ಮೂಲಕ, ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆಯಾಗುವುದರ ಕುರಿತು ಸುಳಿವು ನೀಡಿದ್ದಾರೆ.

Lok Sabha Elections

ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ, ಅಪ್ಪಚ್ಚು ರಂಜನ್‌, ಮೈಸೂರು ಮಹರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರು ಚರ್ಚೆಯಲ್ಲಿದೆ ಎಂಬುದು ಕೂಡ ಗಮನಿಸಬೇಕಾದ ಸಂಗತಿಯಾಗಿದೆ.

ಇನ್ನೂ ಇದೇ ವೇಳೆ ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಸಿಗಲ್ವಾ ಎಂಬ ಪ್ರಶ್ನೆಗೆ ಉತ್ತರ ನೀಡಿರುವ ವಿಜಯೇಂದ್ರ ಅವರು ಆತರಹ ಏನೂ ಇಲ್ಲ. ಕೇಂದ್ರ ನಾಯಕರು ತೀರ್ಮಾನ ಮಾಡುತ್ತಾರೆ ಎಂದಷ್ಟೇ ಹೇಳಿದರು.

ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಬಗ್ಗೆ ಡಾ. ಮಂಜುನಾಥ್ ಜೊತೆ ಮಾತಾಡಿದ್ದೀರಾ ಎಂಬ ಪ್ರಶ್ನೆಗೆ ಏನು ಮಾತಾಡದೇ ಸೈಲೆಂಟಾದ ವಿಜಯೇಂದ್ರ ಕೈಮುಗಿದು ನಿಂತರು.

ಇನ್ನು ಕೆಲವು ಕ್ಷೇತ್ರಗಳಲ್ಲಿ ಹಾಲಿಗಳಿಗೆ ವಿರೋಧ ವಿಚಾರವಾಗಿ ಮಾತನಾಡಿದ ಅವರು ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಅಂತಿಮವಾಗಿರುತ್ತದೆ. ಗೊಂದಲದ ಪ್ರಶ್ನೆ ಇಲ್ಲ. ಯಾರನ್ನೇ ಅಭ್ಯರ್ಥಿ‌ ಮಾಡಿದರೂ ಒಟ್ಟಾಗಿ ಕೆಲಸ ಮಾಡಿ ಗೆಲ್ಲಿಸ್ತೇವೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯ 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ‌ ಹೆಸರು ಬಿಡುಗಡೆ

ಲೋಕಸಭೆ ಚುನಾವಣೆ ಅಭ್ಯರ್ಥಿಗಳಿಗಳಿಗೆ ಸಂಬಂಧಿಸಿ ಹೈಕಮಾಂಡ್‌ ಬಿಡುಗಡೆ ಮಾಡಲಿರುವ 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆಯಂತೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿ ಎಲ್ಲಾ 28 ಕ್ಷೇತ್ರಗಳಿಗೂ ಒಂದೇ ಬಾರಿ ಟಿಕೆಟ್‌ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.

10ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ

ಈ ಬಾರಿ ಸುಮಾರು 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಇದೆ ಎಂದು ಸುದ್ದಿ ಇದೆ. ಈಗಾಗಲೇ ರಾಜ್ಯದಿಂದ ಶಾರ್ಟ್ ಲಿಸ್ಟ್ ಮಾಡಿ ಬಿಜೆಪಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಸುಮಾರು 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್‌ ತಪ್ಪಲಿದೆ‌.

ಶೋಭಾ ಕರಂದ್ಲಾಜೆ ಟಿಕೆಟ್ ಮಿಸ್ ಆಗುತ್ತಾ?

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಶೋಭ ಕರಂದ್ಲಾಜೆ ಅವರಿಗೆ ಟಿಕೆಟ್‌ ಮಿಸ್‌ ಆಗಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಶೋಭಾ ಸ್ವಪಕ್ಷೀಯರಿಂದಲೇ ಈ ಹುನ್ನಾರ ಎಂದು ಕಿಡಿಕಾರಿದ್ದಾರೆ.

There is a possibility that Pratap Sinha will miss out on the Mysore ticket - there are many doubts after Vijayendra's statement

You might also like
Leave A Reply

Your email address will not be published.