ಮನಸೆಳೆದ ವಿಭಿನ್ನ ಚುನಾವಣಾ ಪ್ರಚಾರ : ಚಪ್ಪಲಿ ಹಾರ ಹಾಕಿಕೊಂಡು ಪ್ರಚಾರಕ್ಕಿಳಿದ ಅಭ್ಯರ್ಥಿ

ಲೋಕಸಭಾ ಚುನಾವಣೆ ಪ್ರಯುಕ್ತ ಎಲ್ಲೆಡೆ ಬಿಸಿ ಬಿಸಿ ವಾತಾವರಣ ನಿರ್ಮಾಣವಾಗಿದ್ದು, ಅಭ್ಯರ್ಥಿಗಳು ಸಹ ಚುನಾವಣೆಯಲ್ಲಿ ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ವಿಭಿನ್ನವಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಹೊಸ ತಂತ್ರಗಳನ್ನು ಯೋಜಿಸುತ್ತಿದ್ದಾರೆ. ಹಾಗೆಯೇ ಉತ್ತರಪ್ರದೇಶದ ಅಲಿಗಢ್‌ ನ ಅಭ್ಯರ್ಥಿಯೊಬ್ಬರು ಮಾಡುತ್ತಿರುವ ಪ್ರಚಾರ ಕಾರ್ಯ ಎಲ್ಲೆಡೆ ಸಖತ್ ವೈರಲ್ ಆಗಿದೆ. ಅಷ್ಟಕ್ಕೂ ಅವರು ಕೈಗೊಂಡಿರುವ ತಂತ್ರವೇನು!?

ಸಾಮಾನ್ಯವಾಗಿ ನಾವು ಯಾರನ್ನಾದರೂ ಶಿಕ್ಷಿಸಲು ಅಥವಾ ಅವಮಾನಿಸಲು ಚಪ್ಪಲಿಯಲ್ಲಿ ಒಡೆಯುವುದನ್ನು ಅಥವಾ ಚಪ್ಪಲಿ ಹಾರ ಹಾಕುವುದನ್ನು ನೋಡಿರುತ್ತೇವೆ. ಆದರೆ ಅಲಿಗಢದ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಹೂವಿನ ಹಾರ ಬದಲು ಚಪ್ಪಲಿ ಹಾರವೇ ಯಾಕೆ..?

ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿದ್ದು, ಅವರ ಚುನಾವಣಾ ಚಿಹ್ನೆ ಚಪ್ಪಲಿ ಆಗಿದೆ. ಸ್ವತಃ ಕೇಶವ್ ದೇವ್ ಅವರೇ ಚಪ್ಪಲಿ ಚುನಾವಣಾ ಚಿಹ್ನೆಗೆ ಅರ್ಜಿ ಸಲ್ಲಿಸಿರುವುದಾಗಿದೆ. ಅದರಂತೆ ಚಿಹ್ನೆ ದೊರೆತ ಬಳಿಕ ಕೊರಳಿಗೆ 7 ಚಪ್ಪಲಿಗಳನ್ನು ಹಾರ ಮಾಡಿ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಕೇಶವ್‌ ಅವರು ಭ್ರಷ್ಟಾಚಾರವನ್ನು ವಿರೋಧಿಸುವ ಮೂಲಕವೂ ಸುದ್ದಿಯಲ್ಲಿದ್ದಾರೆ.

You might also like
Leave A Reply

Your email address will not be published.