ನಮಾಜ್‌ʼಗೆ ಅಸ್ತು – ಹನುಮಾನ್‌ ಚಾಲೀಸಾಗೆ ಕೇಸ್‌ : ಸಿಎಂ ಸಿದ್ದು ವಿರುದ್ಧ ಜೋಷಿ ಕಿಡಿ

ಬೆಳಗ್ಗೆ 6 ಗಂಟೆಗೂ ಮುನ್ನ ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸಾ ಹಾಕುವುದು ತಪ್ಪೇ? ತಮ್ಮ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದವರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದು ತುಷ್ಟಿಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಈ ಹಿಂದೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೆಯೇ ಹಿಂದೂ ವಿರೋಧಿನೀತಿ ಅನುಸರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ? ಎಂದು ತರಾಟೆಗೆ ತೆಗೆದುಕೊಂಡರು.

ರಾಜ್ಯ ಸರ್ಕಾರ ಕೂಡಲೇ ಹನುಮಾನ್ ಚಾಲೀಸಾ ಪಠಿಸಿದವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

Agreeing to Namaz - Case for Hanuman Chalisa: Joshi outraged against CM Siddu

ಹಾಗೆ ನೋಡಿದರೆ, ಸಿದ್ದರಾಮಯ್ಯಗೆ ಸಿದ್ಧಾಂತಗಳೇ ಇಲ್ಲ. ಜೆಡಿಎಸ್‌ ನಲ್ಲಿದ್ದಾಗ ಕಾಂಗ್ರೆಸ್‌ ಹಾಗೂ ಸೋನಿಯಾಗಾಂಧಿ ಬಗ್ಗೆ ಸಾಕಷ್ಟು ಬೈದಿದ್ದಾರೆ. ಅಂಥವರೆ ಇದೀಗ ರಾಹುಲ್‌ ಗಾಂಧಿ ಎದುರಿಗೆ ಟೊಂಕ ಬಗ್ಗಿಸಿ ನಿಲ್ಲುವ ಪರಿಸ್ಥಿತಿ ಬಂದಿದೆ.

ಈ ಸಂದರ್ಭದಲ್ಲಿ, ರಾಷ್ಟ್ರಪತಿ, ಪ್ರಧಾನಿ ಮಾಡುತ್ತೇನೆ ಎಂದರೂ ಬಿಜೆಪಿ ಸೇರಲ್ಲ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಾಧ್ಯಮಗಳೊಂದಿಗೆ ಮಾತನಾಡಿ ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆದಿಲ್ಲ. ಅವರು ಯಾಕೆ ಈ ಹೇಳಿಕೆ ಕೊಟ್ಟಿದ್ದಾರೆ ಗೊತ್ತಿಲ್ಲ ಎಂದರು.

You might also like
Leave A Reply

Your email address will not be published.