ರಾಜ್ಯಪಾಲರಿಗೆ ಕೊರೋನ ಪಾಸಿಟಿವ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ಅದರಲ್ಲಿ ಕೊವಿಡ್‌ ಪಾಸಿಟಿವ್ ದೃಢಪಟ್ಟಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ ಪಾಸಿಟಿವ್ ದೃಢಪಟ್ಟಿರುವುದರಿಂದ ರಾಜ್ಯಪಾಲರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ತಮ್ಮ‌ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

You might also like
Leave A Reply

Your email address will not be published.