ಡಾ|| ಬಿ.ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ ಕಡ್ಡಾಯ – ಸರ್ಕಾರಿ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ.

Dr|| BR Ambedkar Jayanti Celebration Compulsory - Govt

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ, ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಿಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಾಧಿಕಾರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ.

You might also like
Leave A Reply

Your email address will not be published.