ಜೀವ ತೆಗೆದ ಪಟಾಕಿ – ತಮಿಳುನಾಡಿನಲ್ಲಿ ಮೇಲಿಂದ ಮೇಲೆ ಪಟಾಕಿ ದುರಂತ

ತಮಿಳುನಾಡಿನಲ್ಲಿ ಪಟಾಕಿ ದುರಂತ ಮುಂದುವರಿದಿದ್ದು, ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ (ಮೇ 10) ನಡೆದ ಸ್ಫೋಟದಲ್ಲಿ ಐವರು ಮಹಿಳೆಯರು ಸೇರಿದಂತೆ 8 ಕಾರ್ಮಿಕರು ಬಲಿಯಾಗಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕೃತ ಪರವಾನಗಿಯೊಂದಿಗೆ ನಡೆಸಲಾಗುತ್ತಿದ್ದ ಘಟಕದಲ್ಲೇ ದುರಂತ ನಡೆದಿದ್ದು, ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ಇಲ್ಲಿನ ವಿವಿಧ ಪಟಾಕಿ ತಯಾರಿಕಾ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ 27 ಮಂದಿ ಮೃತಪಟ್ಟಿದ್ದರು.

Sivakasi Tragedy continues: 9 Dead, Including 5 Women, After Blaze At Firecracker Unit.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಶಿವಕಾಶಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

You might also like
Leave A Reply

Your email address will not be published.