ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ – ವಿರೋಧ ಪಕ್ಷದ ಉಪನಾಯಕ

ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದಾಗಿ ರಾಜ್ಯದ ವಿದ್ಯಾರ್ಥಿಗಳು ಈಗಾಗಲೇ ರೋಸಿಹೋಗಿದ್ದಾರೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ನೊಂದ ವಿದ್ಯಾರ್ಥಿಗಳು ನನ್ನನ್ನು ಭೇಟಿ ಮಾಡಿ, ಈ ಅನ್ಯಾಯದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಿದರು.

ರಾಜ್ಯ ಸರ್ಕಾರ ಎಲ್ಲೆಲ್ಲಿ ಕೊಳ್ಳೆ ಹೊಡೆಯಬಹುದೋ ಅಲ್ಲಲ್ಲಿ ತನ್ನೊಬ್ಬ ಏಜೆಂಟ್‌ಗಳನ್ನು ನೇಮಿಸುತ್ತದೆ. ಅದರಲ್ಲಿ ಶಿವಶಂಕರಪ್ಪ ಒಬ್ಬ. ಕೆಪಿಎಸ್‌’ಸಿಯಲ್ಲಿನ ದುರಾಡಳಿತ, ಭ್ರಷ್ಟಾಚಾರಕ್ಕೆ ರಾಜ್ಯದ ವಿದ್ಯಾರ್ಥಿಗಳು ರೋಸಿಹೋಗಿದ್ದಾರೆ. ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ನಿಮಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆಪಿಎಸ್‌’ಸಿ ಹಾಲಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ರನ್ನು ಈ ಕೂಡಲೇ ಉಚ್ಛಾಟನೆ ಮಾಡಿ ಹಾಗೂ ಸೂಕ್ತ ತನಿಖೆಗೆ ಆದೇಶಿಸಿ, ದಕ್ಷ ಅಧಿಕಾರಿ ಕೆ.ಎಸ್ ಲತಾ ಕುಮಾರಿ ಅವರನ್ನು ಸ್ಥಾನದಲ್ಲಿ ಮುಂದುವರಿಸಿ. ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ನಡೆಸುತ್ತೇವೆ ಎಂದು ಬೆಲ್ಲದ ಎಚ್ಚರಿಸಿದರು.

You might also like
Leave A Reply

Your email address will not be published.