ಚುನಾವಣೆ ಘೋಷಣೆಗೂ ಮುಂಚೆಯೇ ದಕ್ಷಿಣ ಪ್ರವಾಸ – ಕರ್ನಾಟಕದ ಈ ಸ್ಥಳಗಳಲ್ಲಿ ಮೋದಿ ರ್ಯಾಲಿ

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಇತ್ತಕಡೆ ಕೇಂದ್ರ ಹಾಗೂ ಆಯಾ ರಾಜ್ಯದ ನಾಯಕರು ಕಣಕ್ಕೆ ಇಳಿದು ಮತದಾರರನ್ನು ತಮ್ಮತ್ತ ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇನ್ನೂ ಕರ್ನಾಟಕದಲ್ಲಿ ಮತದಾರರನ್ನು ಆಕರ್ಷಿಸಲು ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕಾಗಿ ಆಗಮಿಸುತ್ತಿದ್ದು, ಮುಂದಿನ 8 ದಿನಗಳಲ್ಲಿ 4 ರ್ಯಾಲಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಹಾಗಾದರೆ ಯಾವ್ಯಾವ ದಿನ ಯಾವ್ಯಾವ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿಗಾಗಿ ಈ ಸ್ಟೋರಿ ಓದಿ.

ಭಾರತೀಯ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಮೊದಲೇ, ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಹಲವು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನೂ ಮಾರ್ಚ್ 15 ರಿಂದ 19 ರ ನಡುವೆ ದಕ್ಷಿಣ ಭಾರತದಲ್ಲಿ ವ್ಯಾಪಕ ಪ್ರಚಾರ ನಡೆಸುವದರೊಂದಿಗೆ, ಕರ್ನಾಟಕದಲ್ಲಿ ಕನಿಷ್ಠ ನಾಲ್ಕು ಸಮಾವೇಶಗಳಲ್ಲಿ ಭಾಗಿಯಾಗಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಮಾರ್ಚ್ 15 ರಂದು ಕೋಲಾರದಲ್ಲಿ, ಮಾರ್ಚ್ 17 ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರ ಮಧ್ಯಾಹ್ನ 2 ಗಂಟೆಗೆ ಕೇರಳದಿಂದ ನೇರವಾಗಿ ವಿಶೇಷ ಫ್ಲೈಟ್ನಲ್ಲಿ ಆಗಮಿಸಲಿದ್ದು ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಾರ್ಚ್ 18 ರಂದು ಬೀದರ್ʼನಲ್ಲಿ ಮತ್ತು ಮಾರ್ಚ್ 19 ರಂದು ಧಾರವಾಡದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮಾತನಾಡಲಿದ್ದಾರೆ. ಇದೇ ಅವಧಿಯಲ್ಲಿ ದಕ್ಷಿಣ ಭಾರತದ ಹಲವು ಕಡೆಗಳಲ್ಲಿ ರ್ಯಾಲಿಗಳನ್ನು ನಡೆಸಲಿದ್ದಾರೆ.

South tour before election announcement - Modi rally at these places in Karnataka

2019ರ ಲೋಕಸಭೆ ಚುನಾವಣೆಯಲ್ಲಿ 28ರಲ್ಲಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದ್ದವು. ಮೂರನೇ ಸ್ಥಾನವನ್ನು ಮಂಡ್ಯದಿಂದ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಗೆದ್ದುಕೊಂಡಿದ್ದು, ಅವರಿಗೆ ಬಿಜೆಪಿ ಹೊರಗಿನಿಂದ ಬೆಂಬಲ ನೀಡಿತ್ತು.

ಪ್ರಸ್ತುತ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವುದು ಹಾಗೂ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗುರಿಯಾಗಿದೆ.

You might also like
Leave A Reply

Your email address will not be published.