ಡೆಂಗ್ಯೂ ಹೆಚ್ಚಳದ ವಿರುದ್ಧ ನೀವು ಕೈಗೊಂಡ ಕ್ರಮವೇನು? – ಕುರ್ಚಿ ಜಗಳದಲ್ಲಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚುತ್ತಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಡೆಂಗ್ಯೂ ಜ್ವರಕ್ಕೆ ಬಲಿಯಾದವರ ಸಂಖ್ಯೆ ಉಲ್ಬಣಗೊಳ್ಳುತ್ತಿದೆ. ಈ ನಡುವೆ ಸರ್ಕಾರ ಮಾತ್ರ ಹಗರಣಗಳ ಬಗ್ಗೆ ಹಾಗೂ ಕುರ್ಚಿ ಜಗಳದಲ್ಲೇ ಬ್ಯುಸಿಯಾಗಿದ್ದು, ಡೆಂಗ್ಯೂ ತಡೆಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕರ್ನಾಟಕ ಹೈಕೋರ್ಟ್, ಬುಧವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ಆದೇಶಿಸಿದೆ.

ಡೆಂಗ್ಯೂ ಜ್ವರದ ಹೆಚ್ಚಳದಿಂದಾಗಿ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಬೇಕಾದ ಅಗತ್ಯವಿದೆ ಎಂದು ಉಲ್ಲೇಖಿಸಿ ಆಂಗ್ಲ ಪತ್ರಿಕೆಯೊಂದಕ್ಕೆ ರಾಯಚೂರಿನ ವ್ಯಕ್ತಿಯೊಬ್ಬರು ಓದುಗರ ವಿಭಾಗಕ್ಕೆ ಬರೆದ ಪತ್ರವನ್ನು ಆಧರಿಸಿ, ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿ, ಇದೇ ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸೂಕ್ತ ಉತ್ತರ ಸಲ್ಲಿಸುವಂತೆ ನ್ಯಾಯಾಲಯ ಆದೇಶ ಜಾರಿಗೊಳಿಸಿದೆ.

What action have you taken against the rise of dengue?

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೊಳ್ಳೆ ನಿಯಂತ್ರಿಸಿ ಡೆಂಗ್ಯೂ ಜ್ವರ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮ, ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಡೆಂಗ್ಯೂ ರೋಗಿಗಳಿಗೆ ಕಲ್ಪಿಸಿರುವ ವೈದ್ಯಕೀಯ ಸೌಲಭ್ಯದ ವಿವರ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮದ ವಿವರಣೆ ನೀಡಬೇಕು ಎಂದು ಪೀಠ ಆದೇಶದಲ್ಲಿ ವಿವರಿಸಿದೆ.

ನ್ಯಾಯಾಲಯದ ಆದೇಶವನ್ನು ಯಾವುದೇ ವಿಳಂಬವಿಲ್ಲದೆ ಸರ್ಕಾರಕ್ಕೆ ತಲುಪಿಸುವಂತೆ ಆದೇಶಿಸಲಾಗಿದ್ದು, ಅಡ್ವೋಕೆಟ್ ಜನರಲ್’ಗಳು ಈ ಕುರಿತು ಒಪ್ಪಿಕೊಂಡ ನಂತರ ವಿಚಾರಣೆಯನ್ನು ಜುಲೈ 23 ಕ್ಕೆ ನ್ಯಾಯಾಲಯ ಮುಂದೂಡಿದೆ.

ರಾಜ್ಯದಲ್ಲಿ ಈವರೆಗೆ 7840 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ. ಸರ್ಕಾರ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದು, ಈಗಾಗಲೇ ಟಾಸ್ಕ್ ಫೋರ್ಸ್ ರಚನೆಯಾಗಿದೆ ಎನ್ನಲಾಗಿದೆ.

You might also like
Leave A Reply

Your email address will not be published.