ಆರ್ಟಿಕಲ್ 370 ರದ್ಧತಿ ಹಿಂದಿನ ರೋಚಕ ಕಥೆ

ಪ್ರಧಾನಿ ಮೋದಿಯವರು ಆರ್ಟಿಕಲ್ 370ನ್ನು ರದ್ದುಗೊಳಿಸುವ ದೂರದೃಷ್ಟಿಯ ನಿರ್ಧಾರದಿಂದ ಪ್ರಸ್ತುತ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜತೆ ಮರಳಿದೆ. ಹಿಂಸಾಚಾರದಿಂದ ನಲುಗಿ ಹೋಗಿದ್ದ ಕಣಿವೆಯಲ್ಲಿ ಬೆಳವಣಿಗೆ ಮತ್ತು ಅಭಿವೃದ್ಧಿಯು ಮಾನವ ಜೀವನಕ್ಕೆ ಹೊಸ ಅರ್ಥವನ್ನು ತಂದಿದೆ. ಪ್ರವಾಸೋದ್ಯಮ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಸಮೃದ್ಧಿಯು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ನಿವಾಸಿಗಳ ಆದಾಯ ಮಟ್ಟವನ್ನು ಹೆಚ್ಚಿಸಿದೆ.

ಆದರೆ, ಈ ಕಾಯ್ದೆ ರದ್ದುಗೊಳಿಸಲು ಮೋದಿ ಪಟ್ಟ ಪಾಡೇನು? 2019 ರಲ್ಲಿ ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಬೆಂಗಾವಲು ವಾಹನವಿಲ್ಲದೆ ಏಕಾಂಗಿಯಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿ, ಅತ್ಯಂತ ರಹಸ್ಯವಾಗಿ ರಾಷ್ಟ್ರಪತಿಗಳನ್ನು ಖುದ್ದಾಗಿ ಭೇಟಿಯಾಗಿದ್ದರು ಎಂಬ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ. ಏನದು?

ಹೌದು! 2019ರ ಆಗಸ್ಟ್ 4ರ ಸಂಜೆ ಮೋದಿಯವರು ತಮಗಿದ್ದ ಕಡ್ಡಾಯ ಭದ್ರತೆಯನ್ನು ತ್ಯಜಿಸಿ ಏಕಾಂಗಿಯಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿ ಅಂದಿನ ರಾಷ್ಟ್ರಪತಿ ರಾಮನಾಥ್‌ ಕೋವಿಂದ ಅವರನ್ನು ಭೇಟಿಯಾಗಿದ್ದರು. ಆ ಭೇಟಿಯಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವುದರ ಅಗತ್ಯವನ್ನು ಸ್ವತಃ ತಾವೇ ವಿವರಿಸಿದ್ದರು. 370ನೇ ಪರಿಚ್ಛೇದ ರದ್ದುಪಡಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದ ವಿಪಕ್ಷಗಳಿಗೆ ಈ ಕುರಿತ ಸಿದ್ಧತೆಯ ಬಗ್ಗೆ ಮಾಹಿತಿ ತಿಳಿಯದಂತೆ ರಹಸ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿದ್ದರು ಎಂದು ಹೇಳಲಾಗಿದೆ.

Interesting story behind Article 370 abrogation

ನಂತರ ಬಿಜೆಪಿ ನೇತೃತ್ವದ ಎನ್.ಡಿ.ಎ ಗೆ ರಾಜ್ಯಸಭೆಯಲ್ಲಿ ಬಹುಮತವಿಲ್ಲದಿದ್ದರೂ ರಿಸ್ಕ್‌ ತೆಗೆದುಕೊಂಡು ಜಮ್ಮು ಕಾಶ್ಮೀರ ಮರುವಿಂಗಡಣೆ ಮಸೂದೆ-2019ನ್ನು ಲೋಕಸಭೆಯ ಬದಲು ರಾಜ್ಯಸಭೆಯಲ್ಲೇ ಮೊದಲು ಆಗಸ್ಟ್ 5ರಂದು ಮಂಡಿಸಲಾಗಿತ್ತು. ಲೋಕಸಭೆಯಲ್ಲಿ ಮೊದಲು ಮಂಡಿಸಿದ್ದರೆ ವಿಪಕ್ಷಗಳು ಎಚ್ಚೆತ್ತುಕೊಂಡು ನಂತರ ರಾಜ್ಯಸಭೆಯಲ್ಲಿ ಅದು ಪಾಸಾಗದಂತೆ ನೋಡಿಕೊಳ್ಳುವ ಅಪಾಯವಿತ್ತು. ಹೀಗಾಗಿ ಮೊದಲು ರಾಜ್ಯಸಭೆಯಲ್ಲಿ ಅಂಗೀಕರಿಸಿಕೊಂಡು, ನಂತರ ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿತ್ತು ಎಂದು ತಿಳಿದುಬಂದಿದೆ.

You might also like
Leave A Reply

Your email address will not be published.