ರಾಮೇಶ್ವರಂ ಕೆಫೆ ಬ್ಲಾಸ್ಟ್ – ಶಂಕಿತನ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾ.1 ರಂದು ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ ಅಧಿಕಾರಿಗಳು ಶಂಕಿತ ಉಗ್ರನ ಬಂಧನಕ್ಕೆ ಬಲೆ ಬೀಸಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಯಾರು ಆತ? ಈತನೇ ಉಗ್ರನ ಅಥವಾ ಅನುಮಾನದ ಮೇಲೆ ಬಂಧಿಸಲಾಗಿದ್ಯ? ಈ ಪ್ರಕರಣಕ್ಕೆ ಕೊನೆ ಸಿಕ್ತ? ಎಂಬಿತ್ಯಾದಿ ಪ್ರಶ್ನೆಗಳಿಗೆ ಮಾಹಿತಿ ಇಲ್ಲಿದೆ..

ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್’ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಇಂದು ಬೆಳಿಗ್ಗೆ 4 ಗಂಟೆಗೆ ಶಬ್ಬೀರ್ ಎಂಬುವನನ್ನು ಅಧಿಕಾರಿಗಳು ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಆತನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

Rameswaram Cafe Blast - Suspect Arrested

ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇದ್ಯಾ ಎಂಬ ಅನುಮಾನದ ಮೇಲೆ ಶಬ್ಬೀರ್ ನನ್ನು ತನಿಖೆಗೆ ಒಳಪಡಿಸಲಾಗಿದೆ. ಸದ್ಯ ಶಂಕಿತ ಉಗ್ರ ಹೈದರಾಬಾದ್’ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

You might also like
Leave A Reply

Your email address will not be published.