ಲಾಲ್ ಬಾಗ್’ನಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜನೆಗೆ ಸಿದ್ಧತೆ

ಜೂನ್‌ ಮೊದಲ ವಾರದಲ್ಲಿ ಲಾಲ್‌ಬಾಗ್‌ನಲ್ಲಿ ಮಾವು ಮತ್ತು ಹಲಸು ಮೇಳ ನಡೆಸಲು ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ತೀರ್ಮಾನಿಸಿದೆ.

ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ.

ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಜತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್‌, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ. ಐಐಎಚ್‌ಆರ್‌, ಜಿಕೆವಿಕೆ ಮತ್ತಿತರ ಸಂಸ್ಥೆ ಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದು ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ.

ಮಾವು ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ಸೇರಿದಂತೆ ನಾನಾ ತಳಿಯ ಹಣ್ಣುಗಳು ಮಾರಾಟವಾಗಲಿವೆ. ಉಪ್ಪಿನಕಾಯಿ ಸೇರಿದಂತೆ ಮಾವಿನಿಂದ ತಯಾರಿಸಿದ ನಾನಾ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.

Preparations for organizing mango and jackfruit fair at Lal Bagh

ಈ ಬಾರಿ ಏರು ಹಂಗಾಮಾಗಿದ್ದು ರಾಜ್ಯದಲ್ಲಿ ಸುಮಾರು 15 ಲಕ್ಷ ಟನ್‌ ಮಾವು ಉತ್ಪಾದನೆಯಾಗಬೇಕಿತ್ತು. ಆದರೆ, ಸಕಾಲದಲ್ಲಿ ಮಳೆಯಿಲ್ಲದ ಪರಿಣಾಮ ಹಾಗೂ ಅಧಿಕ ತಾಪಮಾನದಿಂದಾಗಿ ಕೇವಲ 4-5 ಲಕ್ಷ ಟನ್‌ನಷ್ಟು ಮಾವು ಉತ್ಪಾದನೆಯಾಗಲಿದೆ. ನಾನಾ ರಾಜ್ಯಗಳಲ್ಲೂ ಮಾವು ಬೆಳೆ ಕೈಕೊಟ್ಟಿದೆ. ಹೀಗಾಗಿ ದರ ಕೊಂಚ ಹೆಚ್ಚೇ ಇರಲಿದೆ ಎನ್ನುತ್ತಾರೆ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧಿಕಾರಿಗಳು.

You might also like
Leave A Reply

Your email address will not be published.