ಕೈ ಬಿಟ್ಟು ಕಮಲ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರೀಯವರ ಮೊಮ್ಮಗ ವಿಭಾಕರ್

ಮ್ಯಾನ್ ಆಫ್ ಪೀಸ್ ಎಂದೇ ಪ್ರಸಿದ್ಧಿ ಹೊಂದಿದ್ದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿಯವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಹೌದು, ಮೂಲಗಳ ಪ್ರಕಾರ ವಿಭಾಕರ್ ಶಾಸ್ತ್ರಿ ಅವರು ಇಂದು ಬಿಜೆಪಿಯನ್ನು ಸೇರಲಿದ್ದಾರೆ. ಆದರೆ ಈಗ ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಆದ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದು ಈ ಟ್ವೀಟ್ ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ‘ಗೌರವಾನ್ವಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರೇ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಒಂದು ಕಡೆ ರಾಹುಲ್ ಗಾಂಧಿ ಭಾರತ್ ಜೋಡೋದಂತ ಯಾತ್ರೆಗಳನ್ನು ನಡೆಸುತ್ತಿದ್ದು ಇನ್ನೊಂದು ಕಡೆ ಪಕ್ಷದ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಇದು ಭಾರತ್ ಜೋಡೋ ಯಾತ್ರೆಯೋ ಅಥವಾ ಕಾಂಗ್ರೆಸ್ ತೊಡೋ ಯಾತ್ರೆಯೋ ಎಂದು ರಾಹುಲ್ ಗಾಂಧಿಯವರನ್ನೇ ಕಾಲೆಳೆಯುತ್ತಿದ್ದಾರೆ.

ವಿಭಾಕರ್ ಅವರು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಸಿಎಂ ಬ್ರಜೇಶ್ ಪಾಠಕ್ ಅವರ ನೇತೃತ್ವದಲ್ಲಿ ಲಕ್ನೌನ ಪ್ರದೇಶ ಕಾರ್ಯಾಲಯದಲ್ಲಿ ಬಿಜೆಪಿಯನ್ನು ಸೇರಿದರು. ಬಿಜೆಪಿಗೆ ಆಗಮಿಸಿದ ವಿಭಾಕರ್ ಶಾಸ್ತ್ರಿಯವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾನು ದೇಶಕ್ಕೆ ಇನ್ನು ಹೆಚ್ಚಿನ ರೀತಿಯಲ್ಲಿ ಸೇವೆಗಳನ್ನು ಸಲ್ಲಿಸಲು ಸಿದ್ಧನಿದ್ದೇನೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಗುರಿಯಂತೆ ಜೈ ಜವಾನ್, ಜೈ ಕಿಸಾನ್ ಹಾದಿಯಲ್ಲಿ ದೇಶಕ್ಕೆ ಕೊಡುಗೆ ನೀಡುವುದಾಗಿ ಹೇಳಿದ ಅವರು ದೇಶದ ಅಭಿವೃದ್ಧಿ ಕಾರ್ಯಗಳಲ್ಲಿ ನನ್ನ ಕೈಜೋಡಿಸಲು ಇಚ್ಛಿಸುತ್ತೇನೆ ಎಂದು ಹೇಳಿದರು.

You might also like
Leave A Reply

Your email address will not be published.