ಅಳಿಯ ಮಂಜುನಾಥ್‌ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ ಇಬ್ಬರು ಒಗ್ಗಟ್ಟಾಗಿದ್ದು, ಕೋಲಾರ, ಮಂಡ್ಯ, ಹಾಸನ ಜಿಲ್ಲೆಗಳನ್ನು ಜೆಡಿಎಸ್ ಗೆ ಕೊಟ್ಟಿದ್ದಾರೆ. ಉಳಿದ 25 ಕ್ಷೇತ್ರದಲ್ಲಿ ನಮ್ಮವರು ಬಿಜೆಪಿ ಚಿಹ್ನೆಗೆ ಮತ ಹಾಕಬೇಕು ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಶಾಸಕರು, ಮುಖಂಡರು, ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಚ್.ಡಿ ಕುಮಾರಸ್ವಾಮಿ ಅವರು ನಮಗೆ ನೀಡಲಾದ 3 ಜೆಡಿಎಸ್ ಕ್ಷೇತ್ರಗಳೊಂದಿಗೆ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿಯೂ ಹೋರಾಟ ಮಾಡುತ್ತಾರೆ. ನಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಯಿಂದ ನಿಲ್ಲಿಸಬೇಕು ಎಂದು ಕೇಂದ್ರದ ನಾಯಕರು ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿದ್ದು, ಇಂದು ಡಾ. ಮಂಜುನಾಥ್ ಸಹ ಒಪ್ಪಿಗೆ ಕೊಟ್ಟಿದ್ದಾರೆ ತಿಳಿಸಿದರು.

ಡಾ.ಮಂಜುನಾಥ್ ರಾಜಕೀಯಕ್ಕೆ ಬರುವ ವ್ಯಕ್ತಿ ಅಲ್ಲ. ಭಾರತದಲ್ಲಿ 2 ಸಾವಿರ ಹೃದಯ ರೋಗದ ಚಿಕಿತ್ಸೆ ಮಾಡುವ ಆಸ್ಪತ್ರೆ ಮಾಡಿರುವುದು ನನಗೆ ಹೆಮ್ಮೆ ಇದೆ. ಖಾಸಗಿ ಆಸ್ಪತ್ರೆಗಳಲ್ಲೂ ಮಾಡದ ಕೆಲಸ ಮಾಡಿ ಮಂಜುನಾಥ್ ಸಾಧನೆ ಮಾಡಿದ್ದಾರೆ. ಕಣ್ಣೀರು ಹಾಕಿದ ಬಡವನಿಗೆ ಡಾ. ಮಂಜುನಾಥ್ ಉಚಿತವಾಗಿ ಚಿಕಿತ್ಸೆ ನೀಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಕರ್ನಾಟಕವಲ್ಲದೇ ದೇಶದ್ಯಂತ ವೈದ್ಯಕೀಯ ಲೋಕಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಾರೆ ಎಂಬ ಭರವಸೆ ನನಗಿದೆ. ಹೀಗಾಗಿ ಮಂಜುನಾಥ್‌ ಅವರನ್ನು ಬೆಂಬಲಿಸಬೇಕು ಎಂದು ಮೆಚ್ಚುಗೆ ವ್ಯಕ್ತಪಡಿಸುವುದರೊಂದಿಗೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

You might also like
Leave A Reply

Your email address will not be published.