ಸಮಸ್ತ ಹಿಂದೂಗಳಿಗೆ ಮತ್ತೊಂದು ಸಿಹಿಸುದ್ದಿ – ಮಥುರಾ ಶ್ರೀ ಕೃಷ್ಣ ಜನ್ಮಭೂಮಿ ಸರ್ವೇಗೆ ಕೋರ್ಟ್ ಅನುಮತಿ.

ಶ್ರೀ ಕೃಷ್ಣ ಜನ್ಮಭೂಮಿ ಪ್ರಕರಣದಲ್ಲಿ ಶಾಹಿ ಈದ್ಗಾ ಮಸೀದಿಯ ಸರ್ವೇಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಹಿಂದೂಗಳಲ್ಲಿ ಸಂಭ್ರಮ ಮನೆಮಾಡಿದೆ.

ಶತಮಾನಗಳ ಹೋರಾಟದ ಪರಿಣಾಮ ಶ್ರೀ ರಾಮ ಮಂದಿರ ನಿರ್ಮಾಣ ಅಂತಿಮ ಹಂತಕ್ಕೆ ಬಂದಿದ್ದು, 2024ರ ಜನವರಿ 22 ರಂದು ಶ್ರೀ ರಾಮರ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಹಾಗೆಯೇ, ಜ್ಞಾನವಾಪಿ ಮಸೀದಿಯ ಸರ್ವೇಗೂ ಅಲ್ಲಿನ ಹೈಕೋರ್ಟ್ ಅನುಮತಿ ನೀಡಿತ್ತು, ಸರ್ವೇಯ ವರದಿ ಇದೀಗ ಅಂತಿಮ ಹಂತದಲ್ಲಿದ್ದು ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ. ಈ ಬೆನ್ನಲ್ಲೇ, ಮಥುರಾದ ಶ್ರೀ ಕೃಷ್ಣ ಜನ್ಮಭೂಮಿಯ ಸರ್ವೇಗೆ ಅಲಹಾಬಾದ್ ನ್ಯಾಯಾಲಯ ಅನುಮತಿ ನೀಡಿದ್ದು, ಕೃಷ್ಣ ಭಕ್ತರು ಹರ್ಷಗೊಂಡಿದ್ದಾರೆ.

ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಕೃಷ್ಣನ ದೇವಸ್ಥಾನ ಕೆಡವಿ ನಿರ್ಮಿಸಲಾಗಿದೆ. ಈ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳು ಹಿಂದೂ ದೇವಸ್ಥಾನ ಶೈಲಿಯಲ್ಲಿವೆ. ಹಿಂದೂ ದೇವಾಲಯವನ್ನು ಅತಿಕ್ರಮಿಸಿ ಮಸೀದಿ ನಿರ್ಮಿಸಲಾಗಿದೆ. ಅಲ್ಲದೇ, ಅದೇ ಸ್ಥಳದಲ್ಲಿಯೇ ಶೌಚಾಲಯ ನಿರ್ಮಿಸಲಾಗಿದೆ. ಆದ್ದರಿಂದ, ಶಾಹಿ ಈದ್ಗಾ ಮಸೀದಿಯ ಸರ್ವೇ ನಡೆಸಬೇಕೆಂದು ಶ್ರೀಕೃಷ್ಣ ವಿರಾಜಮಾನ ಸಮಿತಿ ಹಾಗೂ ಇತರ 7 ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ. 3 ಜನ ಅಧಿಕಾರಿಗಳ ಸಮಿತಿ ರಚಿಸಿ ಅಲಹಾಬಾದ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಶಾಹಿ ಈದ್ಗಾ ಮಸೀದಿಯ ಸರ್ವೇ ನಡೆಸಬೇಕು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

You might also like
Leave A Reply

Your email address will not be published.