ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಬಿಎಸ್‌ ಯಡಿಯೂರಪ್ಪ ಮೇಲೆ ಪೋಕ್ಸೋ ಪ್ರಕರಣ ದಾಖಲು

ಯಾವುದೇ ಸಮಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಈ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಅದಲ್ಲದೇ ಇತ್ತೀಚಿಗೆ ಲೋಕಸಭೆ ಚುನಾವಣೆ ಪ್ರಯುಕ್ತ ಬಿಜೆಪಿ ರಾಜ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನೆಟ್ಟಿಗರು ಈಗಾಗಲೇ ಕುಟುಂಬ ರಾಜಕಾರಣದ ವಿರುದ್ಧ ಕಿಡಿಕಾರಿದ್ದರು. ಇದೀಗ ಲೈಂಗಿಕ ದೌರ್ಜನ್ಯ ಆರೋಪ ಬೇರೆ ದಾಖಲಾಗಿದ್ದು, ಯಾವುದೇ ಸಂದರ್ಭದಲ್ಲಿ ಬಂಧಿಸಬಹುದಾಗಿದೆ. ಸದ್ಯ ಮಾಜಿ ಸಿಎಂ ಸಂಕಷ್ಟದಲ್ಲಿ‌ ಸಿಲುಕಿದ್ದು, ನುಂಗಲಾರದ ಬಿಸಿತುಪ್ಪದಂತೆ ಪರಿಣಮಿಸಿದೆ.

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ) ಅಡಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆಯ ತಾಯಿ ಗುರುವಾರ ಸಂಜೆ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಸದಾಶಿವನಗರ ಪೊಲೀಸ್‌ ಠಾಣೆ ಪೊಲೀಸರು ನಿನ್ನೆ ಮಧ್ಯರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಫ್‌’ಐಆರ್‌ ನಲ್ಲಿ ಏನಿದೆ?

ತಾಯಿ ಮತ್ತು ಮಗಳು ಫೆಬ್ರವರಿ 2ರಂದು ಬಿಎಸ್‌ ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಲು ಬಿಎಸ್‌’ವೈ ಮನೆಗೆ ತೆರಳಿದ್ದರು. ಆ ವೇಳೆ ಬಿಎಸ್‌ ಯಡಿಯೂರಪ್ಪನವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Sexual assault on girl - POCSO case registered against BS Yeddyurappa

ಅದಲ್ಲದೇ ಬಳಿಕವೇ ಯಡಿಯೂರಪ್ಪನವರು ಕ್ಷಮೆಯಾಚಿಸಿ ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ. ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿರುತ್ತಾರೆ ಎಂದು ಸಂತ್ರಸ್ತೆಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಸಂಕಷ್ಟದಲ್ಲಿ ಸಿಲುಕಿದ ಬಿಎಸ್‌ವೈ!?

ಯಾವುದೇ ಸಮಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಈ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಅದಲ್ಲದೇ ಪೋಕ್ಸೋ ಪ್ರಕರಣ ದಾಖಲಾಗಿರುವುದರಿಂದ ಬಿಎಸ್‌ ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಬಂಧನದ ಭೀತಿಯೂ ಎದುರಾಗಿದೆ.

You might also like
Leave A Reply

Your email address will not be published.