ರೈತರಿಗೆ ಗುಡ್ ನ್ಯೂಸ್ – ಸಾಲದ ಮೇಲಿನ ಬಡ್ಡಿ ಮನ್ನಾ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಿಗೆ ಗುಡ್ʼನ್ಯೂಸ್ ನೀಡಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಸಹಕಾರಿ ಬ್ಯಾಂಕ್‌ಗಳ (Co-Operative Bank) ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಆಗಲಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಬರಗಾಲದ ಈ ದುಸ್ಥಿತಿಯಲ್ಲಿ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಪ್ರತಿಪಕ್ಷವಾದ ಬಿಜೆಪಿ ಆಗ್ರಹಿಸಿತ್ತು. ಈ ಆಗ್ರಹಕ್ಕೆ ಮಣಿದ ಸಿದ್ದರಾಮಯ್ಯನವರು ಸಾಲ ಮರುಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳ ಈ ಆದೇಶಕ್ಕೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಸ್ಥಳದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದರು. ಬರಗಾಲದಿಂದಾಗಿ ರೈತರು ಅವಧಿಯೊಳಗೆ ಸಾಲ‌ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು ಹಾಗೂ ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

You might also like
Leave A Reply

Your email address will not be published.