ಪಿಎಂ ಸೂರ್ಯ ಘರ್ : ಮುಫ್ತ್ ಬಿಜ್ಲಿ ಯೋಜನೆ (PM Surya Ghar : Muft Bijli Yojna)

ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ಹಾಗೂ ಜನರ ಕಲ್ಯಾಣ ಹೆಚ್ಚಿಸಲು ಕೇಂದ್ರ ಸರ್ಕಾರ ಇದೀಗ ಪಿಎಂ ಸೂರ್ಯ ಘರ್ : ಮುಫ್ತ್ ಬಿಜ್ಲಿ ಯೋಜನೆ (PM Surya Ghar : Muft Bijli Yojna) ಎಂಬ ಹೊಸ ಯೋಜನೆಯನ್ನು ಘೋಷಿಸಿದೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಸೂರ್ಯೋದಯ ಯೋಜನೆಯೇ ಇದಾಗಿದೆ. ಮನೆಯ ಮೇಲ್ಛಾವಣಿಯ ಸೌರಶಕ್ತಿ ಯೋಜನೆ ಇದಾಗಿದ್ದು, ಈ ಯೋಜನೆಯಿಂದ ಸುಮಾರು ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ದೊರೆಯಲಿದೆ.

ಸುಮಾರು 1 ಕೋಟಿ ಕುಟುಂಬಗಳು ಈ ಯೋಜನೆಯ ಲಾಭ ಪಡೆಯಲಿವೆ. ಮಾಸಿಕ 300 ಯೂನಿಟ್‌ ಉಚಿತ ವಿದ್ಯುತ್‌ ಅನ್ನು ಈ ಯೋಜನೆಯ ಫಲಾನುಭವಿ ಕುಟುಂಬಗಳು ಪಡೆಯಲಿವೆ. ಜನರಿಗೆ ಯಾವುದೇ ಆರ್ಥಿಕ ಹೊರೆಯಾಗದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪುಗೊಳಿಸಿದ್ದು, ನೇರವಾಗಿ ಜನರ ಬ್ಯಾಂಕ್ ಖಾತೆಗೆ ಸಬ್ಸಿಡಿಯನ್ನು ನೀಡಲು ಮುಂದಾಗಿದೆ. ಜೊತೆಗೆ ಹೆಚ್ಚಿನ ರಿಯಾಯಿತಿಯಲ್ಲಿ ಏಕೀಕೃತ ಬ್ಯಾಂಕ್ ಸಾಲವನ್ನು ನೀಡುತ್ತದೆ. ಎಲ್ಲ ಸ್ಟೇಕ್ ಹೋಲ್ಡರ್ ಗಳನ್ನು ಏಕೀಕೃತ ರಾಷ್ಟ್ರೀಯ ಆನ್ ಲೈನ್ ಪೋರ್ಟಲ್ ನಲ್ಲಿ ಕೇಂದ್ರಿಕರಿಸಿದ್ದು, ಜನರಿಗೆ ಇದರಿಂದ ಅನುಕೂಲವಾಗಲಿದೆ.

ಈ ಯೋಜನೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಲು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿಗಳಿಗೆ ತಮ್ಮ ಪ್ರದೇಶದಲ್ಲಿ ಮನೆಯ ಛಾವಣಿಯ ಮೇಲೆ ಸೌರ ವಿದ್ಯುತ್ ಘಟಕಗಳನ್ನು ಸ್ಥಾಪಿಸಲು ಉತ್ತೇಜನ ನೀಡಲಾಗುವುದು. ಜೊತೆಗೆ ಈ ಯೋಜನೆಯು ಆದಾಯವನ್ನು ಹೆಚ್ಚಿಸುವ, ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವ ಮತ್ತು ಉದ್ಯೋಗಾಕಾವಕಾಶಗಳನ್ನು ಸೃಷ್ಟಿಸುವ ಉದ್ದೇಶ ಹೊಂದಿದೆ.

PM Surya Ghar : Muft Bijli Yojna

ಕೇಂದ್ರ ಸರ್ಕಾರ ಮೂರು ರೀತಿಯ ಸಬ್ಸಿಡಿಯನ್ನು ಈ ಯೋಜನೆಯಲ್ಲಿ ನೀಡುತ್ತಿದೆ. ಅವುಗಳೆಂದರೆ,

1. 150 ಯೂನಿಟ್ ವರೆಗೂ ವಿದ್ಯುತ್ ಬಳಸುವ ಮನೆಗಳಿಗೆ 1 ರಿಂದ 2 ಕಿಲೋ ವ್ಯಾಟ್ ಘಟಕ ಅಗತ್ಯ ಇದೆ. ಅದಕ್ಕಾಗಿ 30 ಸಾವಿರ ರೂ.ನಿಂದ 60 ಸಾವಿರ ರೂ.ವರೆಗೂ ಸಬ್ಸಿಡಿ ಸಿಗಲಿದೆ.
2. 150 ರಿಂದ 300 ಯೂನಿಟ್ ವರೆಗೂ ವಿದ್ಯುತ್ ಬಳಸುವ ಮನೆಗಳಿಗೆ 2 ರಿಂದ 3 ಕಿಲೋ ವ್ಯಾಟ್ ಘಟಕ ಅಗತ್ಯ ಇದೆ. ಅದಕ್ಕಾಗಿ 60 ಸಾವಿರ ರೂ.ನಿಂದ 78 ಸಾವಿರ ರೂ.ವರೆಗೂ ಸಬ್ಸಿಡಿ ಸಿಗಲಿದೆ.
3. 300 ಯೂನಿಟ್ ಗೂ ಹೆಚ್ಚು ವಿದ್ಯುತ್ ಬಳಸುವ ಮನೆಗಳಿಗೆ 3ಕ್ಕಿಂತ ಹೆಚ್ಚು ಕಿಲೋ ವ್ಯಾಟ್ ಘಟಕ ಅಗತ್ಯ ಇದೆ. ಅದಕ್ಕಾಗಿ 78 ಸಾವಿರ ರೂ. ಸಬ್ಸಿಡಿ ಸಿಗಲಿದೆ.

ಪಿಎಂ ಸೂರ್ಯ ಘರ್ : ಮುಫ್ತ್ ಬಿಜ್ಲಿ ಯೋಜನೆಗೆ http://pmsuryaghar.gov.in ಮೂಲಕ ಅರ್ಜಿ ಸಲ್ಲಿಸಬಹುದು.

You might also like
Leave A Reply

Your email address will not be published.