ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೃತಿ ಕರಬಂಧ

ಬಾಲಿವುಡ್ ನಟಿ ಕೃತಿ ಕರಬಂಧ ನಿನ್ನೆ ದೆಹಲಿಯಲ್ಲಿ ಬಹುಕಾಲದ ಗೆಳೆಯನಾದ ಪುಲ್ಕಿತ್ ಸಾಮ್ರಾಟ್ ಜೊತೆ ಹಸೆಮನೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿರುವ ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಬಾಲಿವುಡ್ ಸ್ಟಾರ್’ಗಳಾದ ರಿಚಾ ಚಡ್ಡಾ, ಅಲಿ ಫಜಲ್, ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್, ಜೋಯಾ ಅಕ್ತರ್, ರಿತೇಶ್ ಸಿದ್ವಾನಿ, ಲವ್ ರಂಜನ್ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗುವ ಮೂಲಕ ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ.

ಮಾರ್ಚ್ 13ರಂದು ಮೆಹಂದಿ ಕಾರ್ಯಕ್ರಮ ನಡೆದಿದ್ದು, ಮಾರ್ಚ್ 14ರಂದು ಹಳದಿ ಶಾಸ್ತ್ರ ಮತ್ತು ಕಾಕ್’ಟೈಲ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ನಿನ್ನೆ ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್ನಲ್ಲಿ ಈ ಜೋಡಿ ಹಸಮಣೆ ತುಳಿದಿದೆ. ದೆಹಲಿಯಲ್ಲಿರುವ ಐಟಿಸಿ ಗ್ರ್ಯಾಂಡ್ ಐಷಾರಾಮಿ ರೆಸಾರ್ಟ್ನಲ್ಲಿ ಮದುವೆ ನಡೆದಿದೆ.

Kriti Karabandha entered married life

ಮದುವೆಗೆ ಗ್ರ್ಯಾಂಡ್ ಭಾರತ್ ರೆಸಾರ್ಟ್ ಆಯ್ಕೆ ಯಾಕೆ?

ಗ್ರ್ಯಾಂಡ್ ಭಾರತ್ ರೆಸಾರ್ಟ್ನಲ್ಲಿ ಸುಮಾರು 4 ಪ್ರೆಸಿಡೆಂನ್ಸಿಯಲ್ ವಿಲ್ಲಾವಿದೆ. ಐಷಾರಾಮಿ ಸ್ಪಾಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಇನ್ನೂ ಕೃತಿ, ಪುಲ್ಕಿತ್ ಇಬ್ಬರೂ ದೆಹಲಿಯಲ್ಲೇ ಹುಟ್ಟಿ ಬೆಳೆದಿದ್ದಾರೆ. ಇವರ ಕುಟುಂಬ ದೆಹಲಿಯಲ್ಲಿಯೇ ನೆಲೆಸಿರುವುದರಿಂದ ಇದೇ ಸೂಕ್ತ ಆಯ್ಕೆ ಎಂದು ಜೋಡಿ ನಿರ್ಧರಿಸಿದೆ.

You might also like
Leave A Reply

Your email address will not be published.