247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ : ಪಠ್ಯಕ್ರಮ, ಸ್ಪರ್ಧಾತ್ಮಕ ಪರೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ!

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಖಾಲಿ ಇರುವ ಗ್ರೂಪ್ ‘ಸಿ’ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – ಪಿಡಿಒ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಮೂಲ ವೃಂದ ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದಕ್ಕೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್’ಲೈನ್ ಮೂಲಕ ಅರ್ಜಿಯನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದು.

1. ವಿದ್ಯಾರ್ಹತೆ: ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಪಡೆದಿರಬೇಕು.

2. ಒಟ್ಟು ಹುದ್ದೆಗಳು: 247 (150RPC+ 97HK)

3. ವಯಸ್ಸಿನ ಅರ್ಹತೆ: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
• ಎಸ್ಸಿ, ಎಸ್ಟಿ, ಪ್ರವರ್ಗ- 1 ಅಭ್ಯರ್ಥಿಗಳಿಗೆ 40 ವರ್ಷ.

4. ಪ್ರಮುಖ ದಿನಾಂಕಗಳು:
• ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 15-04-2024
• ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2024
• ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

5. ಅರ್ಜಿ ಶುಲ್ಕ ವಿವರ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
• ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

6. ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.

7. ಪಿಂಚಣಿ ಸೌಲಭ್ಯ : ಸರ್ಕಾರದ ಆದೇಶ ಸಂಖ್ಯೆ- FD (SPL) 04 ಪಿಇಟಿ 2005, ದಿನಾಂಕ 31-03-2006 ರಂತೆ ನೀಡಲಾಗುತ್ತದೆ.

8. ಅರ್ಜಿ ಸಲ್ಲಿಸಬೇಕಾದ ವಿಳಾಸ/ ವೆಬ್ಸೈಟ್: https://www.kpsc.kar.nic.in/

ಕರ್ನಾಟಕ ಪಿಡಿಒ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹೇಗಿರುತ್ತದೆ?

ಕರ್ನಾಟಕ ಪಿಡಿಒ ಹುದ್ದೆಗೆ ಒಟ್ಟು 200 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಕೆಳಗಿನ ಮಾದರಿಯಲ್ಲಿ ನಡೆಸಲಾಗುತ್ತದೆ.

1. ಪತ್ರಿಕೆ-1 ಸಾಮಾನ್ಯ ಜ್ಞಾನ

ಈ ಪತ್ರಿಕೆಯಲ್ಲಿ ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನ, ಸಾಮಾನ್ಯ ವಿಜ್ಞಾನ, ಭೂಗೋಳ ಶಾಸ್ತ್ರ, ಸಮಾಜ ವಿಜ್ಞಾನ ವಿಷಯಗಳು. ಭಾರತ ಮತ್ತು ಕರ್ನಾಟಕದ ಇತಿಹಾಸ, ಭಾರತದ ಸಂವಿಧಾನ, ಬೌದ್ಧಿಕ ಸಾಮರ್ಥ್ಯದ ವಿಷಯಗಳನ್ನು ಒಳಗೊಂಡಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಸಂಸ್ಥೆಗಳು ಹಾಗೂ ಗ್ರಾಮೀಣ ಸಹಕಾರ ಸಂಸ್ಥೆಗಳು, ಕರ್ನಾಟಕದ ಭೂ ಸುಧಾರಣೆಗಳು, ಕರ್ನಾಟಕದ ಅರ್ಥವ್ಯವಸ್ಥೆ. ಕರ್ನಾಟಕ ಪರಿಸರ ಸಭಂಧಿತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕುರಿತ ವಿಷಯಗಳ ಮೇಲೆ 100 ಅಂಕಗಳಿಗೆ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಬಹುಆಯ್ಕೆ ಮಾದರಿಯ ಪ್ರಶ್ನೆಪತ್ರಿಕೆಯಾಗಿದ್ದು, ಸಮಯದ ಅವಧಿ 1.30 ತಾಸುಗಳು.

2. ಪತ್ರಿಕೆ-2: ಸಂವಹನ
ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಕುರಿತ 100 ಅಂಕಗಳು ಇರಲಿದ್ದು, ಪರೀಕ್ಷೆಯ ಅವಧಿ 2 ಗಂಟೆ.

You might also like
Leave A Reply

Your email address will not be published.