ದಾವೂದ್’ಗೆ ವಿಷಪ್ರಾಶನ ಮಾಡಿಸಿದ “Unknown Person” – ಪಾಕ್’ನಲ್ಲಿ ಏನ್ ನಡೀತಿದೆ? ಓದಿ ನೋಡಿ.

ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ತೀವ್ರ ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದ್ದು, ಅಧಿಕೃತ ಮಾಹಿತಿ ಹೊರಬರಬೇಕಿದೆ.

ಪಾಕಿಸ್ತಾನದ ಕರಾಚಿಯಲ್ಲಿ ವಾಸಿಸುತ್ತಿರುವ ದಾವೂದ್ ಇಬ್ರಾಹಿಂಗೆ ಅಪರಿಚಿತ ವ್ಯಕ್ತಿಗಳು ವಿಷಪ್ರಾಶನ ಮಾಡಿಸಿದ್ದಾರೆ ಎಂಬ ಬಗ್ಗೆ ಮಾಹಿತಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟವಾಗಿ ತಿಳಿದುಬರುತ್ತಿದೆ.

Dawood Ibrahim

ಆಸ್ಪತ್ರೆಯ ಒಂದು ಪೂರ್ಣ ಮಹಡಿಯನ್ನೇ ದಾವೂದ್ ಇಬ್ರಾಹಿಂ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಈ ಮಹಡಿಗೆ ಆಸ್ಪತ್ರೆಯ ಉನ್ನತ ಅಧಿಕಾರಿಗಳು, ದಾವೂದ್ʼನ ಸಂಬಂಧಿಕರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಈ ಮಹಡಿಯಲ್ಲಿದ್ದ ಇತರೆ ರೋಗಿಗಳನ್ನು ಬೇರೆ ಮಹಡಿಗಳಿಗೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ ಮಾಡಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳ ವರದಿಮಾಡುತ್ತಿದ್ದು, ಪಾಕಿಸ್ತಾನ ಈ ಬಗ್ಗೆ ಗೌಪ್ಯತೆಯನ್ನು ಕಾಪಾಡುತ್ತಿದೆ.

ದಾವೂದ್ ಇಬ್ರಾಹಿಂ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯು (National Investigation Agency) 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಭಯೋತ್ಪಾದನೆ, ಮಾದಕವಸ್ತು ಕಳ್ಳಸಾಗಾಣಿಕೆ ಹಾಗೂ ಸಂಘಟಿತ ಅಪರಾಧ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ದಾವೂದ್ ಇಬ್ರಾಹಿಂ ಪ್ರಮುಖ ಆರೋಪಿಯಾಗಿದ್ದಾನೆ.

ಮುಂಬೈ ಪೊಲೀಸರು ದಾವೂದ್ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನದಲ್ಲಿದ್ದಾರೆ ಎಂದು ವರದಿಯಾಗಿದೆ.

 

You might also like
Leave A Reply

Your email address will not be published.